bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 8
Zechariah 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 9 →
1
ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
2
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.
3
ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.
4
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಯೆರೂಸಲೇವಿುನ ಚೌಕಗಳಲ್ಲಿ ಮುದುಕ ಮುದುಕಿಯರು ಕೂಡ್ರುವರು; ಅತಿವೃದ್ಧಾಪ್ಯದ ನಿವಿುತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವದು.
5
ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಬಾಲಕಿಯರೂ ತುಂಬಿಕೊಂಡಿರುವರು.
6
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ? ಇದು ಸೇನಾಧೀಶ್ವರ ಯೆಹೋವನ ನುಡಿ.
7
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,
8
ಅವರು ಯೆರೂಸಲೇವಿುನೊಳಗೇ ವಾಸವಾಗಿರುವರು; ಸತ್ಯಸಂಧತೆಯಿಂದಲೂ ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.
9
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!
10
ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನ್ನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರಿಸುತ್ತಿದ್ದೆನು.
11
ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರೆನು; ಇದು ಸೇನಾಧೀಶ್ವರ ಯೆಹೋವನ ನುಡಿ.
12
ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
13
ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!
14
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡು ಮಾಡಬೇಕೆಂದು ನಾನು ನಿಷ್ಕರುಣಿಯಾಗಿ ಸಂಕಲ್ಪಿಸಿದಂತೆ
15
ಈ ಕಾಲದಲ್ಲಿ ಯೆರೂಸಲೇವಿುಗೂ ಯೆಹೂದ ಕುಲಕ್ಕೂ ಮೇಲು ಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.
16
ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;
17
ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳುಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.
18
ಸೇನಾಧೀಶ್ವರ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -
19
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.
20
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಜನಾಂಗಗಳೂ ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
21
ಒಂದು ಊರಿನವರು ಇನ್ನೊಂದೂರಿಗೆ ಹೋಗಿ - ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ ಎಂದು ಹೇಳುವರು.
22
ಹೀಗೆ ಬಹು ದೇಶಗಳವರೂ ಬಲವಾದ ಜನಾಂಗಗಳವರೂ ಯೆರೂಸಲೇವಿುನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಬರುವರು.
23
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 9 →
All chapters:
1
2
3
4
5
6
7
8
9
10
11
12
13
14