bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zechariah 9
Zechariah 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 10 →
1
ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ, ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ, ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ
2
ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.
3
ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ದೂಳಿನಂತೆಯೂ ಬಂಗಾರವನ್ನು ಬೀದಿಯ ಬದಿಯಂತೆಯೂ ರಾಶಿರಾಶಿ ಮಾಡಿಕೊಂಡಿದೆ.
4
ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರವಿುಸಿ ಪೌಳಿಗೋಡೆಯನ್ನು ಸಮುದ್ರದೊಳಕ್ಕೆ ಹೊಡೆದು ಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವದು.
5
ಅಷ್ಕೆಲೋನು ಇದನ್ನು ನೋಡಿ ಹೆದರುವದು; ಗಾಜವು ಸಹ ಅತಿಸಂಕಟಪಡುವದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವದು;
6
ಅಷ್ಡೋದಿನಲ್ಲಿ ವಿುಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.
7
ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.
8
ಯಾರೂ ಹಾದುಹೋಗಿ ಬಾರದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ಬೀಳನು; ಏಕಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.
9
ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
10
ನಾನು ಎಫ್ರಾಯೀವಿುನ ರಥಬಲವನ್ನೂ ಯೆರೂಸಲೇವಿುನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಹರಡಿಕೊಂಡಿರುವದು.
11
[ನನ್ನ ಜನವೇ,] ನೀನು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.
12
ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.
13
ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ, ಅದರಲ್ಲಿ ಎಫ್ರಾಯೀಮನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.
14
ಯೆಹೋವನು ಸ್ವಜನರಿಗಾಗಿ ಅವರ ಮೇಲ್ಗಡೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವದು; ಕರ್ತನಾದ ಯೆಹೋವನು ತುತೂರಿಯನ್ನೂದಿ ದಕ್ಷಿಣಪ್ರಾಂತದ ಬಿರುಗಾಳಿಗಳೊಡನೆ ನುಗ್ಗುವನು.
15
ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.
16
ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.
17
ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 10 →
All chapters:
1
2
3
4
5
6
7
8
9
10
11
12
13
14