bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zephaniah 2
Zephaniah 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 3 →
1
ನಾಚಿಕೆಗೇಡಿಯ ಜನಾಂಗದವರೇ, ತೀರ್ಪು ಫಲಿಸುವದರೊಳಗೆ ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವದಕ್ಕೆ ಮುಂಚೆ, ಯೆಹೋವನ ಸಿಟ್ಟಿನ ದಿನವು ನಿಮ್ಮನ್ನು ಮುಟ್ಟುವದಕ್ಕೆ ಮೊದಲು ಸೇರಿಬನ್ನಿರಿ, ಕೂಡಿಕೊಳ್ಳಿರಿ;
2
ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.
3
ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.
4
ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು.
5
ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.
6
ಸಮುದ್ರ ತೀರದ ಆ ಪ್ರಾಂತವು ಹುಲ್ಗಾವಲಾಗುವದು, ಕುರುಬರ ಹೊಂಡಗಳು, ಹಿಂಡುಗಳ ದೊಡ್ಡಿಗಳು, ಇವೇ ಅಲ್ಲಿರುವವು.
7
ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.
8
ಮೋವಾಬ್ಯರೂ ಅಮ್ಮೋನ್ಯರೂ ಉಬ್ಬಟೆಯಿಂದ ನನ್ನ ಜನರ ಮೇರೆಯನ್ನು ಮೀರಿ ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.
9
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.
10
ಆ ಪ್ರಾಂತಗಳವರು ಸೇನಾಧೀಶ್ವರ ಯೆಹೋವನ ಜನರನ್ನು ದೂಷಿಸಿ ಅವರ ಮೇಲೆ ಉಬ್ಬಿಕೊಂಡು ಬಂದದರಿಂದ ಅವರ ಹೆಮ್ಮೆಯ ನಿವಿುತ್ತವೇ ಅವರಿಗೆ ಈ ಗತಿಯಾಗುವದು.
11
ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
12
ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.
13
ಯೆಹೋವನು ಬಡಗಲಿಗೆ ಕೈಚಾಚಿ ಅಶ್ಶೂರವನ್ನು ಧ್ವಂಸಪಡಿಸುವನು; ನಿನೆವೆಯನ್ನು ಹಾಳುಮಾಡಿ ಮರುಭೂವಿುಯಂತೆ ಒಣಗಿಸಿಬಿಡುವನು.
14
ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ ಮುಳ್ಳುಹಂದಿಯೂ ಅದರ ಬೋದಿಗೆಗಳಲ್ಲಿ ವಾಸಮಾಡಿಕೊಳ್ಳುವವು; ಕಿಟಕಿಗಳಲ್ಲಿ ಚಿಲಿಪಿಲಿಗಾನವು ಕೇಳಿಸುವದು; ಹೊಸ್ತಿಲುಗಳಲ್ಲಿ ಹಾಳುಬಡಿಯುವದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವದು.
15
ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.
← Chapter 1
Jump to:
Chapter 1
Chapter 2
Chapter 3
Chapter 3 →
All chapters:
1
2
3