bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Zephaniah 3
Zephaniah 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
1
ಅಯ್ಯೋ, ಅವಿಧೇಯವೂ ಮಲಿನವೂ ಆದ ಹಿಂಸಕ ನಗರಿಯ ಗತಿಯನ್ನು ಏನು ಹೇಳಲಿ!
2
ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.
3
ಅದರಲ್ಲಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಕಡಿಯುವದಕ್ಕೆ ಎಲುಬು ಕೂಡಾ ವಿುಗದು.
4
ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.
5
ಅದರ ಮಧ್ಯೆ ನೆಲೆಗೊಂಡಿರುವ ಯೆಹೋವನು ನ್ಯಾಯಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಬೆಳಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡನು.
6
[ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ.
7
[ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.
8
ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.
9
ಆಗ ಎಲ್ಲರು ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
10
ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.
11
ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
12
ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.
13
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.
14
ಚೀಯೋನ್ ನಗರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಆರ್ಭಟಿಸು! ಯೆರೂಸಲೇಮ್ ಪುರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!
15
ನಿನಗೆ ವಿಧಿಸಿದ ದಂಡನೆಗಳನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
16
ಆ ದಿನದಲ್ಲಿ ಯೆರೂಸಲೇವಿುಗೆ - ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;
17
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.
18
ಅಯ್ಯೋ, ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕೂತಿದೆ ಎಂದು ಮಹೋತ್ಸವಕ್ಕೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.
19
ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.
20
ಆ ಕಾಲದಲ್ಲಿ ನಿಮ್ಮನ್ನು ಕರತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು; ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೆ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿಸ್ತೋತ್ರಗಳಿಗೆ ಗುರಿಮಾಡುವೆನು. ಇದು ಯೆಹೋವನ ನುಡಿ.
← Chapter 2
Jump to:
Chapter 1
Chapter 2
Chapter 3
All chapters:
1
2
3