bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
1 Chronicles 22
1 Chronicles 22
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 23 →
1
ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.
2
ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.
3
ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,
4
ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.
5
ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.
6
ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.
7
ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.
8
ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.
9
ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.
10
ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.
11
ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.
12
ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.
13
ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.
14
ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.
15
ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,
16
ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
17
ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
18
ಆತನು ಅವರಿಗೆ, “ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.
19
ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29