bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
1 Timothy 3
1 Timothy 3
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 4 →
1
ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
2
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
3
ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
4
ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
5
ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
6
ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.
7
ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.
8
ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
9
ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
10
ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.
11
ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
12
ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
13
ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
14
ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
15
ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
16
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 4 →
All chapters:
1
2
3
4
5
6