bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Kings 18
2 Kings 18
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 19 →
1
ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.
2
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.
3
ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
4
ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್ ” ಎಂಬ ಹೆಸರಿತ್ತು.
5
ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.
6
ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
7
ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.
8
ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.
9
ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.
10
ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.
11
ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.
12
ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.
13
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
14
ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.
15
ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.
16
ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.
17
ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.
18
ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.
19
ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು?
20
ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?
21
ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.
22
ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
23
ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.
24
ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.
25
ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.
26
ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.
27
ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.
28
ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
29
ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು’
30
ಹಿಜ್ಕೀಯನು ನಿಮಗೆ, ‘ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ”
31
ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
32
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.
33
ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸಾಧ್ಯ?
34
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?
35
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
36
ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ.
37
ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25