bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Samuel 10
2 Samuel 10
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 11 →
1
ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.
2
ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.
3
ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
4
ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.
5
ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ” ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.
6
ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು
7
ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.
8
ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.
9
ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.
10
ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.
11
ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.
12
ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.
13
ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.
14
ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.
15
ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.
16
ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.
17
ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,
18
ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.
19
ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24