bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
2 Samuel 14
2 Samuel 14
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 15 →
1
ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು
2
ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
3
ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.
4
ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.
5
ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,
6
“ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.
7
ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.
8
ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.
9
ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.
10
ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು.
11
ಆಗ ಆ ಸ್ತ್ರೀಯು, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು” ಎಂದು ಬೇಡಿಕೊಂಡಳು. ಅದಕ್ಕೆ ಅರಸನು, “ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ” ಎಂದು ಹೇಳಿದನು.
12
ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.
13
ಆಕೆಯು, “ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?
14
ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
15
ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, ‘ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು.
16
ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
17
ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.
18
ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.
19
ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.
20
ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು.
21
ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ” ಅಂದನು.
22
ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.
23
ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.
24
ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.
25
ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.
26
ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.
27
ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.
28
ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.
29
ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
30
ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
31
ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿ ಹಚ್ಚಿದ್ದೇಕೆ?” ಎಂದು ಅವನನ್ನು ಕೇಳಿದನು.
32
ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.
33
ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24