bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Deuteronomy 10
Deuteronomy 10
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 11 →
1
ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
2
ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
3
ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.
4
ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.
5
ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
6
(ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
7
ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
8
ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
9
ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.
10
ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.
11
ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.
12
ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
13
ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
14
ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
15
ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
16
ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.
17
ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
18
ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
19
ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
20
ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
21
ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
22
ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34