bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Esther 2
Esther 2
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 3 →
1
ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ, ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು.
2
ಆಗ ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅರಸನಿಗೆ, “ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆಮಾಡಬೇಕು.
3
ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.
4
ಅರಸನು ಯಾವ ಕನ್ಯೆಯನ್ನು ಇಷ್ಟಪಡುವನೋ ಆ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ” ಎಂದು ಹೇಳಿದರು. ಅರಸನು ಅವರ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.
5
ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.
6
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಇವನೂ ಒಬ್ಬನು.
7
ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.
8
ಅರಸನ ನಿರ್ಣಯವೂ, ಆಜ್ಞೆಯೂ ಪ್ರಕಟಿಸಲ್ಪಟ್ಟ ತರುವಾಯ ಕಾರ್ಯನಿರ್ವಾಹಕರು ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೇರಳೂ ಅರಮನೆಗೆ ಬಂದು ಅಂತಃಪುರ ಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು.
9
ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
10
ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.
11
ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.
12
ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.
13
ಅರಸನ ಬಳಿಗೆ ಹೋಗುವ ಸರದಿ ಯಾರಿಗೆ ಬರುವುದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವುದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವುದು.
14
ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ.
15
ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
16
ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.
17
ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.
18
ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.
19
ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.
20
ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ.
21
ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.
22
ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.
23
ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 3 →
All chapters:
1
2
3
4
5
6
7
8
9
10