bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Exodus 37
Exodus 37
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 36
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 38 →
1
ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.
2
ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು.
3
ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.
4
ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
5
ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು.
6
ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.
7
ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.
8
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.
9
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
10
ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
11
ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು.
12
ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು.
13
ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು.
14
ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು.
15
ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
16
ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
17
ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು.
18
ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.
19
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು.
20
ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು.
21
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು.
22
ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು.
23
ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
24
ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.
25
ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.
26
ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.
27
ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು.
28
ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.
29
ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.
← Chapter 36
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 38 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40