bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
John 9
John 9
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 10 →
1
ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
2
ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
3
ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.
4
ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
5
ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.
6
ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
7
ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8
ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
9
ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.
10
ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,
11
ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
12
ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
13
ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
14
ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
15
ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
16
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
17
ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
18
ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
19
ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
20
ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
21
ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
22
ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
23
“ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
24
ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
25
ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.
26
ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
27
ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
28
ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
29
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
30
ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!
31
ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
32
ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.
33
ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
34
ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35
ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
36
ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
37
ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
38
ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
39
ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
40
ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
41
ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21