bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Judges 14
Judges 14
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 15 →
1
ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು
2
ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು.
3
ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.
4
ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
5
ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.
6
ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
7
ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು.
8
ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,
9
ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.
10
ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.
11
ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.
12
ಸಂಸೋನನು ಇವರಿಗೆ, “ ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
13
ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.
14
ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.
15
ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು.
16
ಆಕೆಯು ಸಂಸೋನನ ಮುಂದೆ ಅಳುತ್ತಾ, “ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ತೊಂದರೆಪಡಿಸಿದಳು. ಅವನು ಆಕೆಗೆ, “ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರ ಕೊಟ್ಟನು.
17
ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.
18
ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.
19
ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.
20
ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21