bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Judges 19
Judges 19
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 20 →
1
ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.
2
ಆಕೆಯು ಇವನನ್ನು ಬಿಟ್ಟು ಜಾರತ್ವಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
3
ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.
4
ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
5
ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು
6
ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;
7
ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು.
8
ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.
9
ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.
10
ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.
11
ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ” ಅಂದನು.
12
ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.
13
ಅವನು ತಿರುಗಿ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು.
14
ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.
15
ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.
16
ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.
17
ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, “ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು
18
ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.
19
ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.
20
ಆಗ ಆ ಮುದುಕನು, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;
21
ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
22
ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.
23
ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.
24
ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು.
25
ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.
26
ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.
27
ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ, ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು.
28
ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು.
29
ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.
30
ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು.
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21