bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Lamentations 3
Lamentations 3
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 4 →
1
ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ.
2
ಆತನೇ ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ.
3
ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.
4
ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ;
5
ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.
6
ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ.
7
ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.
8
ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.
9
ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ, ಹಾದಿಗಳನ್ನು ಸುತ್ತುವರಿಯುವಂತೆ ಮಾಡಿದ್ದಾನೆ.
10
ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.
11
ನಾನು ನಡೆದ ದಾರಿಗಳಿಂದ ನನ್ನನ್ನು ತಪ್ಪಿಸಿದ್ದಾನೆ. ಆತನು ನನ್ನನ್ನು ದಿಕ್ಕಿಲ್ಲದವನಂತೆ ಮಾಡಿದ್ದಾನೆ.
12
ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ.
13
ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.
14
ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ, ಹಗಲೆಲ್ಲಾ ಅವರ ಗೇಲಿಯ ಮಾತು ಮತ್ತು ಹಾಡುಗಳಿಗೆ ಗುರಿಯಾಗಿದ್ದೇನೆ.
15
ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.
16
ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ.
17
ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ.
18
“ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು.
19
ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ.
20
ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.
21
ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ!
22
ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
23
ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!
24
“ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.
25
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
26
ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.
27
ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ.
28
ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ.
29
ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ.
30
ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.
31
ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ.
32
ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.
33
ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ.
34
ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,
35
ಪರಾತ್ಪರನಾದ ದೇವರ ಸನ್ನಿಧಿಯಲ್ಲಿ ನ್ಯಾಯವನ್ನು ತಪ್ಪಿಸುವುದೂ,
36
ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?
37
ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?
38
ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.
39
ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?
40
ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ.
41
ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ.
42
“ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.
43
ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಕೊಂದು ಹಾಕಿದ್ದೀ.
44
ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ.
45
ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.
46
ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಹಾಸ್ಯಮಾಡುತ್ತಾರೆ.
47
ಭಯವೂ, ಗುಂಡಿಯೂ, ಸಂಹಾರವೂ ಮತ್ತು ಭಂಗವೂ ನಮಗೆ ಕಾದಿವೆ.”
48
ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.
49
ಯೆಹೋವನು ಆಕಾಶದಿಂದ ಕಟಾಕ್ಷಿಸಿ ನೋಡುವ ತನಕ
50
ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.
51
ನನ್ನ ಪಟ್ಟಣದ ಕನ್ಯೆಯರಿಗಾಗಿ ಅಳುತ್ತಿರುವ ನಾನು ಕಣ್ಣುರಿಯಿಂದ ಪೀಡಿತನಾಗಿದ್ದೇನೆ.
52
ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.
53
ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ ನನ್ನ ಪ್ರಾಣವನ್ನು ತೆಗೆದುಬಿಟ್ಟರು
54
ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆನು ಅಂದುಕೊಂಡೆನು.
55
ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.
56
ನೀನು ನನ್ನ ಧ್ವನಿಯನ್ನು ಕೇಳಿದಿ; ನನ್ನ ನಿಟ್ಟುಸಿರಿಗೂ ಮತ್ತು ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!
57
ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.
58
ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.
59
ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.
60
ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಮತ್ತು ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ.
61
ಯೆಹೋವನೇ, ಅವರು ನನಗೆ ವಿರುದ್ಧವಾಗಿ ಮಾಡಿದ ದೂಷಣೆಯೂ, ನನ್ನ ಹಾನಿಗಾಗಿ ಕಲ್ಪಿಸಿದ ಕುಯುಕ್ತಿಗಳೂ,
62
ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ಮತ್ತು ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ.
63
ಅವರು ಕುಳಿತುಕೊಳ್ಳಲಿ, ಏಳಲಿ ನೋಡುತ್ತಲೇ ಇರು; ನಾನು ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ.
64
ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;
65
ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ!
66
ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 4 →
All chapters:
1
2
3
4
5