bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Leviticus 20
Leviticus 20
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 21 →
1
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
3
ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
4
ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,
5
ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.
6
“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
7
ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
8
ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.
9
“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.
10
“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
11
ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
12
ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.
13
ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
14
ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.
15
ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
16
ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.
17
ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.
18
ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.
19
ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.
20
ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.
21
ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.
22
“‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
23
ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.
24
ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
25
“‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.
26
ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.
27
“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27