bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Leviticus 23
Leviticus 23
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 24 →
1
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.
3
“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.
4
“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.
5
“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.
6
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
7
ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
8
ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು’” ಅಂದನು.
9
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
10
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.
11
ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
12
ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
13
ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
14
ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.
15
“‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.
16
ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.
17
ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
18
ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.
19
ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.
20
ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
21
ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
22
“‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
23
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
24
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.
25
ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.
26
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
27
“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
28
ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
29
ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
30
ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.
31
ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
32
ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.
33
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
34
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
35
ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು.
36
ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.
37
“‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
38
ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.
39
“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.
40
ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.
41
ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
42
ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.
43
ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು.
44
ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27