bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Leviticus 25
Leviticus 25
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 26 →
1
ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,
2
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.
3
ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.
4
ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
5
ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
6
ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,
7
ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
8
“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
9
ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.
10
ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
11
ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
12
ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
13
“‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
14
ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
15
ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
16
ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
17
ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
18
“‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
19
ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
20
“‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
21
ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
22
ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
23
“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
24
ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.
25
“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
26
ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
27
ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
28
ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
29
“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
30
ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
31
ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
32
ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
33
ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.
34
ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.
35
“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
36
ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
37
ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
38
ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
39
“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
40
ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
41
ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
42
ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
43
ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
44
ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
45
ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.
46
ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
47
“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
48
ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.
49
ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
50
ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.
51
ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.
52
ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.
53
ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.
54
ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.
55
ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 26 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27