bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Leviticus 8
Leviticus 8
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 9 →
1
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2
“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
3
ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.
4
ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.
5
ಆಗ ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು” ಎಂದು ಹೇಳಿದನು.
6
ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.
7
ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.
8
ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.
9
ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
10
ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
11
ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
12
ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.
13
ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.
14
ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.
15
ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
16
ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು.
17
ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.
18
ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
19
ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
20
ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು.
21
ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.
22
ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.
23
ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
24
ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
25
ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,
26
ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.
27
ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.
28
ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು.
29
ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.
30
ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.
31
ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.
32
ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.
33
ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
34
ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
35
ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.
36
ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 9 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27