bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Luke 10
Luke 10
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 11 →
1
ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
2
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
3
ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.
4
ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
5
ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.
6
ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
7
ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
8
ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
9
ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
10
ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,
11
‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
12
ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
13
ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
14
ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
15
ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.
16
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
17
ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
18
ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
19
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
20
ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.
21
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
22
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
23
ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
24
ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
25
ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
26
ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
27
ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
28
ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
29
ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
30
ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
31
ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
32
ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
33
ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,
34
ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
35
ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
36
ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,
37
ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.
38
ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
39
ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
40
ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
41
ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
42
ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24