bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Luke 3
Luke 3
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 4 →
1
ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ
2
ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.
3
ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.
4
ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
7
ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?
8
ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.
9
ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.
10
ಆಗ ಆ ಗುಂಪಿನವರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಆತನನ್ನು ಕೇಳಿದ್ದಕ್ಕೆ,
11
ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.
12
ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು,
13
ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು.
14
ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.
15
ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,
16
ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.
17
ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
18
ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಶುಭವಾರ್ತೆಯನ್ನು ಸಾರುತ್ತಿದ್ದನು.
19
ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,
20
ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.
21
ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು
22
ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.
23
ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;
24
ಹೇಲಿಯನು ಮತ್ಥಾತನ ಮಗನು; ಮತ್ಥಾತನನು ಲೇವಿಯ ಮಗನು; ಲೇವಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಯನ್ನಾಯನ ಮಗನು;
25
ಯನ್ನಾಯನು ಯೋಸೇಫನ ಮಗನು; ಯೋಸೇಫನು ಮತ್ತಥೀಯನ ಮಗನು; ಮತ್ತಥೀಯನು ಆಮೋಸನ ಮಗನು; ಆಮೋಸನು ನಹೂಮನ ಮಗನು; ನಹೂಮನು ಎಸ್ಲಿಯ ಮಗನು; ಎಸ್ಲಿಯನು ನಗ್ಗಾಯನ ಮಗನು; ನಗ್ಗಾಯನು ಮಹಾಥನ ಮಗನು;
26
ಮಹಾಥನು ಮತ್ತಥೀಯನ ಮಗನು; ಮತ್ತಥೀಯನು ಶಿಮೀಯನ ಮಗನು; ಶಿಮೀಯನು ಯೋಸೇಖನ ಮಗನು; ಯೋಸೇಖನು ಯೂದನ ಮಗನು; ಯೂದನು ಯೋಹಾನನ ಮಗನು;
27
ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು;
28
ನೇರಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಅದ್ದಿಯನ ಮಗನು; ಅದ್ದಿಯನು ಕೋಸಾಮನ ಮಗನು; ಕೋಸಾಮನು ಎಲ್ಮದಾಮನ ಮಗನು; ಎಲ್ಮದಾಮನು ಏರನ ಮಗನು;
29
ಏರನು ಯೆಹೋಷುವನ ಮಗನು; ಯೆಹೋಷುವನು ಎಲಿಯೇಜರನ ಮಗನು; ಎಲಿಯೇಜರನು ಯೋರೈಮನ ಮಗನು; ಯೋರೈಮನು ಮತ್ಥಾತನ ಮಗನು; ಮತ್ಥಾತನು ಲೇವಿಯನ ಮಗನು;
30
ಲೇವಿಯನು ಸಿಮಿಯೋನನ ಮಗನು; ಸಿಮಿಯೋನನು ಯೂದನ ಮಗನು; ಯೂದನು ಯೋಸೇಫನ ಮಗನು; ಯೋಸೇಫನು ಯೋನಾಮನ ಮಗನು; ಯೋನಾಮನು ಎಲಿಯಕೀಮನ ಮಗನು;
31
ಎಲಿಯಕೀಮನು ಮೆಲೆಯಾನ ಮಗನು; ಮೆಲೆಯಾನು ಮೆನ್ನನ ಮಗನು; ಮೆನ್ನನು ಮತ್ತಾಥನ ಮಗನು; ಮತ್ತಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು;
32
ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು;
33
ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು;
34
ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು;
35
ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೆಗನ ಮಗನು; ಪೆಲೆಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು;
36
ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು;
37
ಲಾಮೆಕನು ಮೆತೂಷಲನ ಮಗನು; ಮೆತೂಷಲನು ಹನೋಕನ ಮಗನು; ಹನೋಕನು ಯೆರೆದನ ಮಗನು; ಯೆರೆದನು ಮಹಲಲೇಲನ ಮಗನು; ಮಹಲಲೇಲನು ಕಯಿನಾನನ ಮಗನು;
38
ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
Recommended Reading
Commentary
Luke Commentaries
→
Devotional
Luke Devotional Guide
→
Get This Bible
IRV Study Bible
→