bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Luke 4
Luke 4
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 5 →
1
ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,
2
ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
3
ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,
4
ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.
5
ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,
6
“ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;
7
ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು.
8
ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.
9
ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
10
‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;
11
ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
12
ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.
13
ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.
14
ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
15
ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
16
ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
17
ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,
18
“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
19
ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.”
20
ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,
21
ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,
22
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
23
ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.
24
ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
25
ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
26
ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.
27
ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.
28
ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,
29
ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
30
ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.
31
ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,
32
ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
33
ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.
35
ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.
36
ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
37
ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು.
38
ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.
39
ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
40
ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
41
ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
42
ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.
43
ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.
44
ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
Recommended Reading
Commentary
Luke Commentaries
→
Devotional
Luke Devotional Guide
→
Get This Bible
IRV Study Bible
→