bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Mark 14
Mark 14
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 15 →
1
ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
2
“ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.
3
ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
4
ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?
5
ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು.
6
ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
7
ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
8
ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
9
ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
10
ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
11
ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
12
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.
13
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
14
ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.
15
“ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.
16
ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.
17
ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
18
ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
19
ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು.
20
ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.
21
ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.
22
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
23
ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
24
ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.
25
ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.
26
ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.
27
ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.
28
ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.
29
ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.
30
ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
31
ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
32
ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.
33
ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.
34
ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.
35
ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.
36
“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
37
ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?
38
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.
39
ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು.
40
ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
41
ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.
42
ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
43
ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
44
ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.
45
ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
46
ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
47
ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
48
ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ?
49
ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.
50
ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.
51
ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;
52
ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
53
ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
54
ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.
55
ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
56
ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
57
ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
59
ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
60
ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು.
61
ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.
62
ಯೇಸುವು “ಹೌದು ನಾನೇ! “ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.
63
ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?
64
ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.
65
ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
66
ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,
67
ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು.
68
ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
69
ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು.
70
ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು.
71
ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
72
ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 15 →
All chapters:
1
2
3
4
5
6
7
8
9
10
11
12
13
14
15
16