bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Matthew 1
Matthew 1
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 2 →
1
ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
2
ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು.
3
ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.
4
ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು.
5
ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.
6
ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.
7
ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.
8
ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.
9
ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.
10
ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.
11
ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.
12
ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು
13
ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು.
14
ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.
15
ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು.
16
ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.
17
ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.
18
ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
19
ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
20
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
21
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
22
ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
23
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
24
ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.
25
ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28