bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Nehemiah 8
Nehemiah 8
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 9 →
1
ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.
2
ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.
3
ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.
4
ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.
5
ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.
6
ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.
7
ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.
8
ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.
9
ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.
10
ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
11
ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು.
12
ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.
13
ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು.
14
ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.
15
ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”
16
ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.
17
ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.
18
ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 9 →
All chapters:
1
2
3
4
5
6
7
8
9
10
11
12
13