bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Numbers 26
Numbers 26
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 27 →
1
ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,
2
“ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
3
ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,
4
“ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.
5
ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,
6
ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.
7
ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.
8
ಪಲ್ಲೂವಿನ ಮಗನು ಎಲೀಯಾಬ್.
9
ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
10
ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
11
ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
12
ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,
13
ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ.
14
ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
15
ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
16
ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
17
ಅರೋದನ ವಂಶಸ್ಥರಾದ ಅರೋದ್ಯರು, ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
18
ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
19
ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
20
ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
21
ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
22
ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
23
ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
24
ಯಾಶೂಬನ ವಂಶಸ್ಥರಾದ ಯಾಶೂಬ್ಯರು, ಶಿಮ್ರೋನನ ವಂಶಸ್ಥರಾದ ಶಿಮ್ರೋನ್ಯರು ಇವರೇ.
25
ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
26
ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ: ಸೆರೆದನ ವಂಶಸ್ಥರಾದ ಸೆರೆದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು.
27
ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
28
ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
29
ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ: ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.
30
ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು,
31
ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು, ಶೆಕೆಮನ ವಂಶಸ್ಥರಾದ ಶೆಕೆಮ್ಯರು,
32
ಶೆಮೀದಾಯನ ವಂಶಸ್ಥರಾದ ಶೆಮೀದಾಯರು, ಹೇಫೆರನ ವಂಶಸ್ಥರಾದ ಹೇಫೆರ್ಯರು ಇವರೇ.
33
ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
34
ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
35
ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
36
ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
37
ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
38
ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
39
ಶೂಫಾಮನ ವಂಶಸ್ಥರಾದ ಶೂಫಾಮ್ಯರು, ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.
40
ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
41
ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
42
ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
43
ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
44
ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.
45
ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು: ಹೇಬೆರನ ವಂಶಸ್ಥರಾದ ಹೇಬೆರ್ಯರು, ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
46
ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.
47
ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
48
ನಫ್ತಾಲಿ ಕುಲದ ಕುಟುಂಬಗಳು: ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,
49
ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು.
50
ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
51
ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
52
ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
53
“ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.
54
ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
55
ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
56
ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
57
ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.
58
ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು.
59
ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
60
ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
61
ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
62
ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
63
ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.
64
ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
65
ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36