bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
Romans 6
Romans 6
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 7 →
1
ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
2
ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
3
ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
4
ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
5
ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
6
ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
7
ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
8
ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
9
ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
10
ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
11
ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
12
ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
13
ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
14
ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
15
ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
16
ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
17
ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
18
ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
19
ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
20
ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
21
ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
22
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
23
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 7 →
All chapters:
1
2
3
4
5
6
7
8
9
10
11
12
13
14
15
16