bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Chronicles 18
1 Chronicles 18
Kannada Bible (KNCL) BSI 2016
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 19 →
1
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ವಶಪಡಿಸಿಕೊಂಡನು.
2
ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
3
ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.
4
ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.
5
ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು;
6
ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.
7
ದಾವೀದನು ಹದರೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರುಸಲೇಮಿಗೆ ಒಯ್ದನು.
8
ಇದಲ್ಲದೆ, ಹದರೆಜೆರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಹೇರಳ ತಾಮ್ರವನ್ನು ತೆಗೆದುಕೊಂಡು ಬಂದನು. ಸೊಲೊಮೋನನು ‘ಕಂಚಿನ ಕಡಲೆಂಬ ಪಾತ್ರೆ’ಯನ್ನೂ ಕಂಬಗಳನ್ನೂ ಇನ್ನಿತರ ಸಾಮಾನುಗಳನ್ನೂ ಮಾಡಿಸಿದ್ದು ಆ ತಾಮ್ರದಿಂದಲೇ.
9
ದಾವೀದನು ಚೋಬನ ಅರಸನಾದ ಹದರೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
10
(ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.
11
ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.
12
ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.
13
ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
14
ದಾವೀದನು ಇಸ್ರಯೇಲರ ಅರಸನಾಗಿ ಪ್ರಜೆಗಳೆಲ್ಲರನ್ನು ಧರ್ಮಾನುಸಾರ, ನ್ಯಾಯಯುತವಾಗಿ ನಡೆಸುತ್ತಿದ್ದನು.
15
ಚೆರೂಯಳ ಮಗ ಯೋವಾಬನು ಅವನ ಸೇನಾಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಅವನ ಮಂತ್ರಿಯಾಗಿದ್ದನು.
16
ಅಹೀಟೂಬನ ಮಗ ಚಾದೋಕನು ಹಾಗು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಶವ್ಷನು ಅವನಿಗೆ ಲೇಖಕನಾಗಿದ್ದನು.
17
ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29