bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Chronicles 27
1 Chronicles 27
Kannada Bible (KNCL) BSI 2016
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 28 →
1
ಇಸ್ರಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿವಿಧ ಸೇವೆಯನ್ನು ಮಾಡಬೇಕಾಗಿದ್ದ ವರ್ಗಗಳ ಅಧಿಪತಿಗಳು ಹಾಗು ಇವರ ಕಾರ್ಯಕ್ರಮಗಳ ಪಟ್ಟಿ: ವರ್ಷದ ಎಲ್ಲಾ ತಿಂಗಳುಗಳಲ್ಲಿ, ತಿಂಗಳಿಗೆ ಒಂದು ವರ್ಗದಂತೆ, ಸರದಿಯ ಮೇಲೆ ಕೆಲಸಕ್ಕಾಗಿ ಬರುತ್ತಿದ್ದ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.
2
ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕ.
3
ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥ. ಮೊದಲನೆಯ ತಿಂಗಳಿನಲ್ಲಿ ಸೇವೆ ಸಲ್ಲಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
4
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕ; ಆ ವರ್ಗದಲ್ಲಿ ಮಿಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
5
ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕ. ಮೂರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
6
ಈ ಬೆನಾಯನು ಮೂವತ್ತು ಮಂದಿಯಲ್ಲಿ ಪ್ರಸಿದ್ಧ ರಣವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನೂ ಇದ್ದನು.
7
ಯೋವಾಬನ ತಮ್ಮನಾದ ಅಸಾಹೇಲನೂ ಅವನು ಸತ್ತನಂತರ ಅವನ ಮಗ ಜೆಬದ್ಯನೂ ನಾಲ್ಕನೆಯ ವರ್ಗದ ನಾಯಕರು; ನಾಲ್ಕನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವರ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
8
ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕ. ಐದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
9
ತೆಕೋವಿನ ಇಕ್ಕೇಷನ ಮಗ ಈರ ಎಂಬವನು ಆರನೆಯ ವರ್ಗದ ನಾಯಕ. ಆರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
10
ಎಫ್ರಯಿಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕ; ಏಳನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ಮಾರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
11
ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕ. ಎಂಟನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
12
ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬ್ಬೀಯೆಜೆರನು ಒಂಬತ್ತನೆಯ ವರ್ಗದ ನಾಯಕ. ಒಂಬತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
13
ನೆಟೋಫ ಊರಿನ ಜಿರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕ; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
14
ಎಫ್ರಯಿಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕ. ಹನ್ನೊಂದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
15
ನೆಟೋಫ ಊರಿನವನೂ ಒತ್ನೀಯೇಲನ ಸಂತಾನದವನೂ ಆದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕ; ಹನ್ನೆರಡನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
16
ಇಸ್ರಯೇಲ್ ಕುಲಗಳ ಅಧ್ಯಕ್ಷರುಗಳು: [ಕುಲ] — [ಅಧ್ಯಕ್ಷರು] ರೂಬೇನ್ — ಜಿಕ್ರಿಯ ಮಗ ಎಲೀಯೆಜೆರ್ ಸಿಮೆಯೋನ್ — ಮಾಕನ ಮಗ ಶೆಫಟ್ಯ 17 ಲೇವಿ — ಕೆಮುವೇಲನ ಮಗ ಹಷಬ್ಯ 18 ಆರೋನ — ಚಾದೋಕ್ ಯೂದ — ಎಲೀಹು, ಅರಸ ದಾವೀದನ ಸಹೋದರರಲ್ಲಿ ಒಬ್ಬ ಇಸ್ಸಾಕಾರ್ — ಮೀಕಾಯೇಲನ ಮಗ ಒಮ್ರಿ 19 ಜೆಬುಲೂನ — ಓಬದ್ಯನ ಮಗ ಇಷ್ಮಾಯ ನಫ್ತಾಲಿ — ಅಜ್ರೀಯೇಲನ ಮಗ ಯೆರೀಮೋತ್ 20 ಎಫ್ರಯಿಮ — ಅಜಜ್ಯನ ಮಗ ಹೊಷೇಯ ಪಶ್ಚಿಮ ಮನಸ್ಸೆ — ಪೆದಾಯನ ಮಗ ಯೋವೇಲ್ 2೧ ಪೂರ್ವ. ಮನಸ್ಸೆ — ಜೆಕರ್ಯನ ಮಗ ಇದ್ದೋ ಬೆನ್ಯಾಮೀನ — ಅಬ್ನೇರನ ಮಗ ಯಗಸೀಯೇಲ್ 22 ದಾನ — ಯೆರೋಹಾಮನ ಮಗ ಅಜರೇಲ್
23
ಇಸ್ರಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂದು ಸರ್ವೇಶ್ವರ ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.
24
ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.
25
ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್;
26
ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ;
27
ದ್ರಾಕ್ಷೀತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ; ದ್ರಾಕ್ಷೀತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಷ್ಮೀಯನಾದ ಜಬ್ದೀ;
28
ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್;
29
ಶಾರೋನಿನಲ್ಲಿ ಮೇಯುವ ದನಗಳ ಮೇಲೆ ಶಾರೋನ್ಯನಾದ ಶಿಟ್ರೈ; ಕಣಿವೆಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್;
30
ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್; ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ;
31
ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.
32
ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯಾಗಿದ್ದನು; ಹಕ್ಮೋನಿಯ ಮಗ ಯೆಹೀಯೇಲನು ರಾಜಪುತ್ರ ಪಾಲಕನಾಗಿದ್ದನು.
33
ಅಹೀತೋಫೆಲನು ಅರಸನ ಮಂತ್ರಿ; ಅಕೀರ್ಯನಾದ ಹೂಷೈಯು ಅವನ ಮಿತ್ರ;
34
ಬೆನಾಯನ ಮಗ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿ.
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 28 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29