bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 John 1
1 John 1
Kannada Bible (KNCL) BSI 2016
Jump to:
Chapter 1
Chapter 2
Chapter 3
Chapter 4
Chapter 5
Chapter 2 →
1
ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.
2
ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.
3
ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.
4
ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.
5
ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.
6
ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.
7
ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.
8
ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.
9
ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.
10
ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.
Jump to:
Chapter 1
Chapter 2
Chapter 3
Chapter 4
Chapter 5
Chapter 2 →
All chapters:
1
2
3
4
5