bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Kings 16
1 Kings 16
Kannada Bible (KNCL) BSI 2016
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 17 →
1
ಆಗ ಸರ್ವೇಶ್ವರಸ್ವಾಮಿ ಹನಾನೀಯನ ಮಗ ಯೇಹುವಿನ ಮುಖಾಂತರ ಬಾಷನಿಗೆ ಹೀಗೆ ಹೇಳಿಸಿದರು:
2
“ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ. ಆದರೂ ನೀನು ಯಾರೊಬ್ಬಾಮನ ಮಾರ್ಗದಲ್ಲೇ ನಡೆದು, ನನ್ನ ಜನರಾದ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದೆ. ಅವರ ಪಾಪದ ಮೂಲಕ ನನಗೆ ಕೋಪವನ್ನೆಬ್ಬಿಸಿದೆ.
3
ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.
4
ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳು ಹಾಗು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವುವು\.
5
ಬಾಷನ ಉಳಿದ ಚರಿತ್ರೆ ಹಾಗು ಅವನ ಪರಾಕ್ರಮ ಸಾಧನೆಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
6
ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಏಲನು ಅರಸನಾದನು.
7
ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.
8
ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗ ಏಲನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.
9
ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.
10
ಆಗ ಜಿಮ್ರಿ ಅಲ್ಲಿಗೆ ಹೋಗಿ ಅವನನ್ನು ಕೆಡವಿ ಕೊಂದುಹಾಕಿದನು. ಅವನಿಗೆ ಬದಲಾಗಿ ತಾನೇ ಅರಸನಾದನು. ಇದು ಜುದೇಯದ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
11
ಇವನು ಸಿಂಹಾಸನದಲ್ಲಿ ಕುಳಿತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧುಮಿತ್ರರನ್ನೂ ಉಳಿಸಲಿಲ್ಲ.
12
ಬಾಷನೂ ಅವನ ಮಗ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರಚೋದಿಸಿದರು. ತಮ್ಮ ವಿಗ್ರಹಗಳಿಂದ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದರು.
13
ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.
14
ಏಲನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
15
ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿ ಎಂಬವನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.
16
ಜಿಮ್ರಿ, ಅರಸನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಕೊಂದುಹಾಕಿದನೆಂಬ ಸುದ್ದಿ ಪಾಳೆಯದಲ್ಲಿದ್ದ ಇಸ್ರಯೇಲರಿಗೆ ಮುಟ್ಟಿತು. ಅವರು ಅದೇ ದಿವಸ, ಅಲ್ಲಿಯೇ, ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.
17
ಇವನೂ ಇವನ ಜೊತೆಯಲ್ಲಿದ್ದ ಇಸ್ರಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
18
ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.
19
ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು.
20
ಜಿಮ್ರಿಯ ಉಳಿದ ಚರಿತ್ರೆ ಹಾಗು ಅವನ ಒಳಸಂಚು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
21
ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.
22
ಆದರೆ ಒಮ್ರಿಯ ಪಂಗಡದವರು ಗೀನತನ ಮಗ ತಿಬ್ನಿಯ ಪಂಗಡದವರನ್ನು ಸೋಲಿಸಿದರು. ತಿಬ್ನಿಯು ಸತ್ತುಹೋದನು; ಒಮ್ರಿಯೇ ಆಳತೊಡಗಿದನು.
23
ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿ ಇಸ್ರಯೇಲರ ಅರಸನಾಗಿ ಹನ್ನೆರಡು ವರ್ಷ ಆಳಿದನು. ಆರು ವರ್ಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
24
ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.
25
ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು.
26
ಇಸ್ರಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಸರ್ವೇಶ್ವರನನ್ನು ರೇಗಿಸಿದಂತೆ ಅವರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲೇ ಇವನೂ ನಡೆದನು.
27
ಇವನ ಉಳಿದ ಚರಿತ್ರೆ, ಪರಾಕ್ರಮ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
28
ಒಮ್ರಿ ಸತ್ತು ಪಿತೃಗಳ ಬಳಿಗೆ ಸೇರಿದಾಗ ಇವನ ಶವವನ್ನು ಸಮಾರಿಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನ ಸ್ಥಾನದಲ್ಲಿ ಇವನ ಮಗ ಅಹಾಬನು ಅರಸನಾದನು.
29
ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಯೇಲರ ಅರಸನಾದನು; ಸಮಾರಿಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.
30
ಇವನು ತನ್ನ ಹಿಂದಿನ ಅಧಿಕಾರಿಗಳೆಲ್ಲರಿಗಿಂತಲೂ ದುಷ್ಟನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ.
31
ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
32
ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು;
33
ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.
34
ಇವನ ಕಾಲದಲ್ಲೆ ಬೇತೇಲಿನವನಾದ ಹೀಯೇಲನು ಜೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನಾದ ಅಬೀರಾಮನನ್ನು ಹಾಗು ಅದಕ್ಕೆ ಬಾಗಿಲುಗಳನ್ನಿಡುವಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಸರ್ವೇಶ್ವರ ನೂನನ ಮಗ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22