bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Kings 2
1 Kings 2
Kannada Bible (KNCL) BSI 2016
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 3 →
1
ದಾವೀದನ ಮರಣಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು:
2
“ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.
3
ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.
4
ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.
5
“ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.
6
ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.
7
“ಆದರೆ ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡು; ಅವರು ದಿನನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಏಕೆಂದರೆ ನಾನು ನಿನ್ನ ಸಹೋದರ ಅಬ್ಷಾಲೋಮನಿಂದ ತಪ್ಪಿಸಿಕೊಂಡು ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
8
ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮಿ ನಿನ್ನ ಬಳಿ ಇರುತ್ತಾನೆ; ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹುಕ್ರೂರವಾಗಿ ಶಪಿಸಿದನು; ಆದರೂ ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಜೋರ್ಡನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕೊಲ್ಲುವುದಿಲ್ಲ,’ ಎಂಬುದಾಗಿ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣಮಾಡಿದೆ.
9
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”
10
ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.
11
ದಾವೀದನು ಇಸ್ರಯೇಲರನ್ನು ಆಳಿದ್ದು ನಾಲ್ವತ್ತು ವರ್ಷ; ಹೆಬ್ರೋನಿನಲ್ಲಿ ಏಳು ವರ್ಷ, ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.
12
ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.
13
ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆ ಅವನನ್ನು, “ನೀನು ಸಮಾಧಾನದಿಂದ ಬಂದಿರುತ್ತೀಯೋ?” ಎಂದು ಕೇಳಿದಳು. ಅವನು, “ಹೌದು, ಸಮಾಧಾನದಿಂದ ಬಂದಿದ್ದೇನೆ,” ಎಂದನು.
14
ಆಮೇಲೆ ಅವನು, “ನಿಮಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ,” ಎನ್ನಲು ಆಕೆ, “ಹೇಳು,” ಎಂದಳು.
15
ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.
16
ಅದಿರಲಿ, ನನ್ನದೊಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡಿ,” ಎಂದನು. ಅದಕ್ಕೆ ಬತ್ಷೆಬೆ, “ಅದೇನು ಹೇಳು,” ಎಂದಳು.
17
ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು.
18
ಬತ್ಷೆಬೆ, “ಒಳ್ಳೇದು, ನಾನು ನಿನ್ನ ಪರವಾಗಿ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ,” ಎಂದು ಹೇಳಿದಳು.
19
ಆಕೆ ಅದೋನೀಯನ ಪರವಾಗಿ ಮಾತಾಡಲು ಅರಸ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನೇ ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು ರಾಜಮಾತೆಗಾಗಿ ಒಂದು ಆಸನವನ್ನು ತರಿಸಿದನು. ಆಕೆ ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
20
“ಒಂದು ಸಣ್ಣ ಬಿನ್ನಹವಿದೆ, ತಿರಸ್ಕರಿಸಬೇಡ,” ಎಂದು ಹೇಳಿದಳು. ಅರಸನು, “ತಾಯೇ, ಏನು ಬೇಕು, ಕೇಳಿ; ನಾನು ಆಗದು ಎನ್ನುವುದಿಲ್ಲ,” ಎಂದನು.
21
ಆಕೆ, “ಶೂನೇಮ್ಯಳಾದ ಅಬೀಷಗಳು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.
22
ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು.
23
ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!
24
ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಅಭಿವೃದ್ಧಿಗೊಳಿಸಿ, ತಾವು ವಾಗ್ದಾನ ಮಾಡಿದಂತೆ ನನಗೆ ಮನೆತನವನ್ನು ಕಟ್ಟಿದ ಸರ್ವೇಶ್ವರನಾಣೆ, ಅದೋನೀಯನು ಈ ದಿನವೇ ಸಾಯಬೇಕು,” ಎಂದು ಹೇಳಿದನು.
25
ಅಂತೆಯೇ ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದನು. ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.
26
ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ
27
ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.
28
ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)
29
ಯೋವಾಬನು ಸರ್ವೇಶ್ವರನ ಗು಼ಡಾರಕ್ಕೆ ಓಡಿಹೋಗಿ ಬಲಿಪೀಠದ ಹತ್ತಿರ ಇದ್ದಾನೆ ಎಂಬ ಸುದ್ದಿ ಅರಸ ಸೊಲೊಮೋನನಿಗೆ ತಲುಪಿತು. ಅವನು ಯೆಹೋಯಾದಾವನ ಮಗ ಬೆನಾಯನಿಗೆ, “ಹೋಗಿ ಅವನನ್ನು ಕೊಂದುಹಾಕು,” ಎಂದು ಆಜ್ಞಾಪಿಸಿದನು.
30
ಬೆನಾಯನು ಸರ್ವೇಶ್ವರನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸರು ಆಜ್ಞಾಪಿಸುತ್ತಾರೆ,” ಎಂದನು. ಆದರೆ ಅವನು, “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ,” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
31
ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
32
ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?
33
ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೂ ಅವನ ಸಂತಾನದವರ ತಲೆಯ ಮೇಲೂ ಇರಲಿ; ಆದರೆ ದಾವೀದನಿಗೂ ಅವನ ಸಿಂಹಾಸನವನ್ನೇರುವ ಸಂತಾನದವರಿಗೂ ಸರ್ವೇಶ್ವರನಿಂದ ನಿತ್ಯಸೌಭಾಗ್ಯ ದೊರಕಲಿ!” ಎಂದನು.
34
ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಮರುಭೂಮಿಯಲ್ಲಿ ಇದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.
35
ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.
36
ತರುವಾಯ ಅರಸನು ಶಿಮ್ಮಿಯನ್ನು ಕರೆಯಿಸಿ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಜೆರುಸಲೇಮಿನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
37
ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.
38
ಅದಕ್ಕೆ ಶಿಮ್ಮಿಯು, “ಒಳ್ಳೆಯದು; ನನ್ನ ಒಡೆಯರೂ ಅರಸರೂ ಆದ ನೀವು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು,” ಎಂದು ಉತ್ತರಕೊಟ್ಟು ಬಹಳ ದಿನಗಳವರೆಗೆ ಜೆರುಸಲೇಮಿನಲ್ಲೇ ವಾಸಿಸುತ್ತಿದ್ದನು.
39
ಮೂರು ವರ್ಷಗಳಾದನಂತರ ಶಿಮ್ಮಿಯ ಇಬ್ಬರು ಗುಲಾಮರು, ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಗುಲಾಮರು ಗತ್ ಊರಿನಲ್ಲಿ ಇರುವುದು ಶಿಮ್ಮಿಗೆ ಗೊತ್ತಾಯಿತು.
40
ಅವನು ಕತ್ತೆಗೆ ತಡಿಹಾಕಿಸಿ ತನ್ನ ಗುಲಾಮರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.
41
ಶಿಮ್ಮಿ ಜೆರುಸಲೇಮಿನಿಂದ ಗತ್ ಊರಿಗೆ ಹೋಗಿ ಬಂದದ್ದು ಅರಸ ಸೊಲೊಮೋನನಿಗೆ ತಿಳಿಯಿತು. ಅವನು ಶಿಮ್ಮಿಯನ್ನು ಕರೆಯಿಸಿ,
42
“ನೀನು ಈ ಊರನ್ನು ಬಿಟ್ಟು ಎಲ್ಲಿಗಾದರು ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ಖಂಡಿತವಾಗಿ ಹೇಳಿ ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡನಲ್ಲವೆ? ಆಗ ನೀನು, ‘ಒಳ್ಳೆಯದು, ಹಾಗೆಯೇ ಮಾಡುತ್ತೇನೆ,’ ಎಂದು ಹೇಳಿದೆಯಲ್ಲವೆ?
43
ಹಾಗಾದರೆ, ಸರ್ವೇಶ್ವರನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ಏಕೆ ಕೈಗೊಳ್ಳಲಿಲ್ಲ?” ಎಂದನು.
44
ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.
45
ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದ ಲಭಿಸಲಿ! ದಾವೀದನ ಸಿಂಹಾಸನ ಸರ್ವೇಶ್ವರನ ಸನ್ನಿಧಿಯಲ್ಲಿ ಸದಾಕಾಲವೂ ಇರಲಿ!” ಎಂದು ಹೇಳಿದನು.
46
ಬಳಿಕ ಯೆಹೋಯಾದವನ ಮಗ ಬೆನಾಯನಿಗೆ ಅವನನ್ನು ಸಂಹರಿಸಬೇಕೆಂದು ಆಜ್ಞಾಪಿಸಿದನು. ಅಂತೆಯೇ ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರ ಸುಭದ್ರವಾಯಿತು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22