bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Kings 5
1 Kings 5
Kannada Bible (KNCL) BSI 2016
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 6 →
1
ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
2
ಸೊಲೊಮೋನನು ದೂತರ ಮುಖಾಂತರ ಹೀರಾಮನಿಗೆ,
3
“ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ.
4
ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.
5
ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.
6
ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.
7
ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.
8
ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
9
ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.
10
ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.
11
ಸೊಲೊಮೋನನಾದರೋ ಪ್ರತಿವರ್ಷ ಅವನ ಮನೆಯವರ ಆಹಾರಕ್ಕಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿಯನ್ನೂ ನಾಲ್ಕು ಸಾವಿರ ಲೀಟರ್ ಅಪ್ಪಟ ಎಣ್ಣೆಯನ್ನೂ ಕೊಡುತ್ತಿದ್ದನು.
12
ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು.
13
ಅರಸ ಸೊಲೊಮೋನನು, ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿಯನ್ನು ಬಿಟ್ಟಿಕೆಲಸಕ್ಕೆಂದು ಹಿಡಿದು,
14
ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ, ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
15
ಇದಲ್ಲದೆ, ಸೊಲೊಮೋನನಿಗೆ ಎಪ್ಪತ್ತು ಸಾವಿರಮಂದಿ ಹೊರೆಹೊರುವವರೂ ಎಂಬತ್ತು ಸಾವಿರಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರೂ ಇದ್ದರು.
16
ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರುಮಂದಿ ಮೇಸ್ತ್ರಿಗಳನ್ನು ನೇಮಿಸಿದ್ದನು.
17
ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು, ಸೊಲೊಮೋನನ ಅಪ್ಪಣೆಯಂತೆ, ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೊರೆಯುತ್ತಿದ್ದರು.
18
ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕೆ ಬೇಕಾದ ಕಲ್ಲು, ಮರಗಳನ್ನು ಸಿದ್ಧಪಡಿಸಿದವರು ಇವರೇ.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22