bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Kings 6
1 Kings 6
Kannada Bible (KNCL) BSI 2016
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 7 →
1
ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
2
ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್.
3
ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದಳತೆ ದೇವಾಲಯದ ಅಗಲಕ್ಕೆ ಸರಿಯಾಗಿ 4:5 ಮೀಟರ್, ಅಗಲಳತೆ 9 ಮೀಟರ್.
4
ಇದಲ್ಲದೆ, ಅವನು ಆಲಯಕ್ಕೆ ತೆರೆಯಲಾಗದ ಜಾಲಂಧರ ಕಿಟಕಿಗಳನ್ನಿಡಿಸಿದನು.
5
ದೇವಾಲಯದ ಗೋಡೆಯ ಸುತ್ತಲೂ ಅಂದರೆ, ಪರಿಶುದ್ಧಸ್ಥಳ ಹಾಗು ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.
6
ಕೆಳಗಿನ ಕೊಠಡಿಗಳ ಅಗಲ 2:2 ಮೀಟರ್; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲ 2:7 ಮೀಟರ್; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲ 3:1 ಮೀಟರ್. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದು ಎಂದು ಗೋಡೆಯ ಹೊರ ಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.
7
ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.
8
ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.
9
ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು.
10
ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು 2:2 ಮೀಟರುಗಳಂತೆ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಹೊಂದಿಕೊಂಡಿದ್ದವು.
11
ಸರ್ವೇಶ್ವರಸ್ವಾಮಿ ಸೊಲೊಮೋನನಿಗೆ, “ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವೆ. ನನ್ನ ನಿಯಮವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಗೊಂಡು, ನೀನು ನಡೆಯುವುದಾದರೆ, ನಿನ್ನನ್ನು ಕುರಿತು ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
13
ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು.
14
ಹೀಗೆ ಸೊಲೊಮೋನನು ದೇವಾಲಯವನ್ನು ಕಟ್ಟಿಮುಗಿಸಿದನು.
15
ದೇವಾಲಯದ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಗೆಗಳನ್ನು ಹಾಕಿಸಿದನು.
16
ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.
17
ದೇವಾಲಯದ ಪರಿಶುದ್ಧ ಸ್ಥಳವೆನಿಸಿಕೊಳ್ಳುವ ಮುಂದಿನ ಭಾಗ 18 ಮೀಟರ್ ಉದ್ದವಿತ್ತು.
18
ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು.
19
ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ‘ಗರ್ಭಗುಡಿ’ ಎಂದು ಪ್ರತ್ಯೇಕಿಸಿದನು.
20
ಆ ಗರ್ಭಗುಡಿ 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.
21
ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು. ಬಂಗಾರದ ತಗಡಿನಿಂದ ಹೊದಿಸಲಾಗಿದ್ದ ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯಿಂದ ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
22
ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ಪೀಠವನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
23
ಇದಲ್ಲದೆ ಅವನು ಎಣ್ಣೇಮರದಿಂದ 4:4 ಮೀಟರ್ ಎತ್ತರವಾದ ಎರಡು ‘ಕೆರೂಬಿ’ಗಳನ್ನು ಮಾಡಿಸಿ ಅವುಗಳನ್ನು ಗರ್ಭಗುಡಿಯಲ್ಲಿರಿಸಿದನು.
24
ಪ್ರತಿಯೊಂದು ಕೆರೂಬಿಯ ರೆಕ್ಕೆಗಳು 2:2 ಮೀಟರ್ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ 4:4 ಮೀಟರ್
25
ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ 4:4: ಮೀಟರ್. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ ಆಗಿತ್ತು.
26
ಅವೆರಡೂ ಒಂದೊಂದು 4:4 ಮೀಟರ್ ಎತ್ತರವಾಗಿದ್ದವು.
27
ಅವನು ಅವುಗಳನ್ನು ದೇವಾಲಯದ ಗರ್ಭಗುಡಿಯಲ್ಲಿರಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆ ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆ ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿ ಇದ್ದವು.
28
ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು.
29
ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿದನು.
30
ದೇವಾಲಯದ ಒಳಗೆ ಮತ್ತು ಹೊರಗಿನ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.
31
ಗರ್ಭಗುಡಿಯ ಬಾಗಿಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.
32
ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ, ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.
33
ಇದಲ್ಲದೆ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿ,
34
ಅದಕ್ಕೆ ತುರಾಯಿಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದ್ದಾಗಿ ಮಡಚುವುದಕ್ಕೆ ಬರುತ್ತಿತ್ತು.
35
ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆ ಇದ್ದಲ್ಲಿ ಆ ತಗಡನ್ನು ಬಡಿಸಿದನು.
36
ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.
37
ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತು.
38
ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 7 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22