bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Kings 7
1 Kings 7
Kannada Bible (KNCL) BSI 2016
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 8 →
1
ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.
2
ಅವನು ಕಟ್ಟಿಸಿದ ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರ 44 ಮೀಟರ್ ಉದ್ದ, 22 ಮೀಟರ್ ಅಗಲ, 13:5 ಮೀಟರ್ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳು ಅವುಗಳ ಮೇಲೆ ಇಡಲಾದ ದೇವದಾರಿನ ತೊಲೆಗಳೂ ಆಧಾರವಾಗಿ ಇದ್ದವು.
3
ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.
4
ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕುಕಿಂಡಿಗಳಿದ್ದವು.
5
ಎಲ್ಲಾ ದ್ವಾರಗಳೂ ಬೆಳಕುಕಿಂಡಿಗಳೂ ಚತುಷ್ಕೋನಾಕಾರವುಳ್ಳವುಗಳು. ಮೂರು ಮೂರು ಸಾಲು ಬೆಳಕುಕಿಂಡಿಗಳು ಎದುರೆದುರಾಗಿದ್ದವು.
6
ಇದಲ್ಲದೆ, ಸೊಲೊಮೋನನು ಒಂದು ಕಂಬಮಂಟಪವನ್ನು ಕಟ್ಟಿಸಿದನು. ಅದರ ಉದ್ದ 22 ಮೀಟರ್; ಅಗಲ 13:5 ಮೀಟರ್, ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.
7
ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದುದರಿಂದ ಅದಕ್ಕೆ ನ್ಯಾಯಮಂದಿರ ಎಂದು ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಗೆಗಳಿಂದ ಹೊದಿಸಲಾಗಿದ್ದವು.
8
ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನಗಾಗಿ ಅರಮನೆಯನ್ನೂ ತನ್ನ ಹೆಂಡತಿಯಾದ ಫರೋಹನ ಮಗಳಿಗಾಗಿ ಇನ್ನೊಂದು ಮನೆಯನ್ನೂ ಕಟ್ಟಿಸಿದನು. ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.
9
ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತುಗೋಡೆಯನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತುಗೋಡೆಯನ್ನೂ ಅಸ್ತಿವಾರದ ಮೇಲಿನಿಂದ ಕಡೇ ವರಸೆಯವರೆಗೆ, ಅಳತೆಯ ಮೇರೆಗೆ ಕೆತ್ತಲ್ಪಟ್ಟಂಥ, ಎರಡು ಮಗ್ಗಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ, ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿದನು.
10
ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು.
11
ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು.
12
ಒಳಗಣ ಪ್ರಾಕಾರವೆನಿಸಿಕೊಳ್ಳುವ ಸರ್ವೇಶ್ವರನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.
13
ಅರಸ ಸೊಲೊಮೋನನು ಟೈರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರೆಸಿದನು.
14
ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.
15
ಅವನು ಎರಡು ಕಂಚಿನ ಕಂಬಗಳನ್ನು ಮಾಡಿದನು. ಅವು 8 ಮೀಟರ್ ಎತ್ತರವಿದ್ದವು. ಅವುಗಳ ಸುತ್ತಳತೆಯು 5:3 ಮೀಟರ್.
16
ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವುದಕ್ಕಾಗಿ 2:2 ಮೀಟರ್ ಎತ್ತರವಾದ ಎರಡು ಕುಂಭಗಳನ್ನೂ
17
ಒಂದೊಂದಕ್ಕೆ ಏಳೇಳರಂತೆ ಕುಂಭದ ಮೇಲೆ ಹಾಕುವುದಕ್ಕಾಗಿ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು;
18
ಇದಲ್ಲದೆ, ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
19
ಕಂಬಗಳ ಮೇಲಿರುವ ಕುಂಭಗಳ ಒಡಲು 1:8 ಮೀಟರ್ ಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು.
20
ಆ ಕುಂಭಗಳ ಮೇಲಿನ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.
21
ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.
22
ಅವನು ಕಂಬಗಳ ಮೇಲೆ ಕಮಲ ಅಲಂಕಾರವನ್ನು ಮಾಡಿ ಅವುಗಳ ಕೆಲಸವನ್ನು ಮುಗಿಸಿದನು.
23
ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,
24
ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕಹೊಯ್ದಿದ್ದನು.
25
ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮ ದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವ ದಿಕ್ಕಿಗೂ ಮುಖಮಾಡಿಕೊಂಡಿದ್ದವು. ಕಡಲು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗ ಒಳಗಡೆ ಇತ್ತು.
26
ಕೊಳದ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಸುಮಾರು ನಾಲ್ವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.
27
ಇದಲ್ಲದೆ, ಹೀರಾಮನು ಹತ್ತು ಕಂಚಿನ ಪೀಠಗಳನ್ನು ಮಾಡಿದನು. ಪ್ರತಿಯೊಂದು 1:8 ಮೀಟರ್ ಉದ್ದ, 1:8 ಮೀಟರ್ ಅಗಲ, 1:3 ಮೀಟರ್ ಎತ್ತರ ಇತ್ತು.
28
ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ: ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.
29
ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ, ಕೆರೂಬಿ, ಇವುಗಳ ಚಿತ್ರಗಳಿದ್ದವು; ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು; ಸಿಂಹ, ಹೋರಿ, ಇವುಗಳ ಮೇಲೂ ಕೆಳಗೂ ತೋರಣಚಿತ್ರಗಳಿದ್ದವು.
30
ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಿನ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಿನ ನೀರಿನ ಬಾನೆಯನ್ನು ಹಿಡಿಯುತ್ತಿದ್ದವು. ಅವುಗಳ ಹೊರ ಮೈಗೆ ತೋರಣಚಿತ್ರಗಳಿದ್ದವು.
31
ಈ ಬಾನೆಯನ್ನು ಇಡುವುದಕ್ಕಾಗಿ ಪೀಠದ ಮೇಲಿನ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿ ಇತ್ತು. ಚಕ್ರಾಕಾರವಾಗಿದ್ದ ಈ ಬಾಯಿಯು ಒಂದೂವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚತುಷ್ಕೋನದವುಗಳಾಗಿದ್ದವು.
32
ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗೆ ಇದ್ದವು. ಇರಸೂ ಪೀಠವೂ ಅಖಂಡವಾಗಿದ್ದವು; ಪ್ರತಿಯೊಂದು ಗಾಲಿಯೂ ಒಂದುವರೆ ಮೊಳ ಎತ್ತರವಿತ್ತು.
33
ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ, ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು.
34
ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.
35
ಪೀಠದ ಮೇಲಿನ ಭಾಗದಲ್ಲಿದ್ದ ಚಕ್ರಾಕಾರ ಆದ ಬಾಯಿಯು ಅರ್ಧಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು;
36
ಆ ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ, ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು.
37
ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವೂ ಅಳತೆಯೂ ಒಂದೇ.
38
ಇದಲ್ಲದೆ ಹೀರಾಮನು 800 ಲೀಟರ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಬಾನೆಗಳನ್ನು ಮಾಡಿ ಪ್ರತಿ ಒಂದು ಪೀಠದ ಮೇಲೆ ಒಂದೊಂದು ಬಾನೆಯನ್ನು ಇಟ್ಟನು.
39
ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಕಂಚಿನ ಕಡಲನ್ನು ದೇವಾಲಯದ ಬಲಗಡೆಯಲ್ಲಿ, ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
40
ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಒಟ್ಟು ಸಾಮಾನುಗಳು ಯಾವುವೆಂದರೆ:-
41
ಎರಡು ಕಂಬಗಳು; ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕಲು ಎರಡು ಜಾಲರಿಗಳು;
42
ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸಲು ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು;
43
ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ನೀರಿನ ಬಾನೆಗಳು;
44
ಕಂಚಿನ ಕಡಲು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು;
45
ಹಂಡೆ, ಸಲಿಕೆ ಹಾಗು ಬೋಗುಣಿಗಳು. ಹೀರಾಮನು ಅರಸ ಸೊಲೊಮೋನನ ಅಪ್ಪಣೆಯಂತೆ ಸರ್ವೇಶ್ವರನ ಆಲಯಕ್ಕಾಗಿ ಈ ಎಲ್ಲ ಸಾಮಗ್ರಿಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿದನು.
46
ಅರಸನು ಜೋರ್ಡನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣು ನೆಲದ ಕುಲುಮೆಯಲ್ಲಿ ಎರಕಹೊಯ್ಸಿದನು.
47
ಸೊಲೊಮೋನನು ತಾನು ಮಾಡಿಸಿದ ಸಾಮಗ್ರಿಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಇಷ್ಟೆಂಬುದನ್ನು ನಿರ್ಧರಿಸಲಾಗಲಿಲ್ಲ.
48
ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ:- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,
49
ಮಹಾಪರಿಶುದ್ಧ ಸ್ಥಳದ ಎದುರಿಗೆ ಎಡಗಡೆಯಲ್ಲೂ ಬಲಗಡೆಯಲ್ಲೂ ಐದೈದರಂತೆ ಇಡುವುದಕ್ಕಾಗಿ ಚೊಕ್ಕಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪವೃಕ್ಷಗಳು, ಬಂಗಾರದ ಹಣತೆ ತಂಡಸುಗಳು,
50
ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,
51
ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22