bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Samuel 13
1 Samuel 13
Kannada Bible (KNCL) BSI 2016
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 14 →
1
ಸೌಲನು ಅರಸನಾದಾಗ ಅವನಿಗೆ ಮೂವತ್ತು ವರ್ಷ. ಅವನು ಇಸ್ರಯೇಲರನ್ನು ನಾಲ್ವತ್ತೆರಡು ವರ್ಷ ಆಳಿದನು.
2
ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.
3
ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.
4
ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.
5
ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.
6
ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.
7
ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.
8
ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಅಲ್ಲಿಗೆ ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
9
ಆಗ ಸೌಲನು ಜನರಿಂದ ದಹನಬಲಿಗೆ ಹಾಗು ಶಾಂತಿಸಮಾಧಾನ ಬಲಿಗೆ ಬೇಕಾದದ್ದನ್ನು ತರಿಸಿ ದಹನಬಲಿಯನ್ನು ಅರ್ಪಿಸಿದನು.
10
ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕಾಗಿ ಮುಂದೆ ಹೋದನು.
11
ಸಮುವೇಲನು, ಅವನನ್ನು ನೋಡಿ, “ಇದೇನು ನೀನು ಮಾಡಿದ್ದು?” ಎಂದು ಕೇಳಿದನು. ಅವನು, “ಜನರು ಚದರಿಹೋಗುವುದನ್ನು, ನೀವು ನಿಯಮಿತಕಾಲಕ್ಕೆ ಬಾರದಿರುವುದನ್ನು ಹಾಗು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನು ನೋಡಿದೆ;
12
ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.
13
ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.
14
ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.
15
ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಎಣಿಸಿದಾಗ ಆರುನೂರು ಮಂದಿಯಿದ್ದರು.
16
ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.
17
ಸುಲಿಗೆ ಮಾಡುವುದಕ್ಕಾಗಿ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟುಬಂದವು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ನಾಡಿಗೆ,
18
ಇನ್ನೊಂದು ಬೇತ್ಹೋರೋನಿನ ಕಡೆಗೆ, ಮತ್ತೊಂದು ಜೆಬೋಯೀಮ್ ಕಣಿವೆಯೂ ಅದರ ಕೆಳಗಿರುವ ಅರಣ್ಯವೂ ಕಾಣಿಸುವ ಸ್ಥಳಕ್ಕೆ ಹೋದವು.
19
ಹಿಬ್ರಿಯರು ಈಟಿಕತ್ತಿಗಳನ್ನು ಮಾಡಿಸಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆ ಇದ್ದುದರಿಂದ ಇಸ್ರಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
20
(ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹಣಿಸುವುದಕ್ಕಾಗಿ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.
21
ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕಾಗಿ ಅವರಲ್ಲಿ ಅರ ಮಾತ್ರ ಇತ್ತು.)
22
ಹೀಗಿದ್ದುದರಿಂದ ಯುದ್ಧ ಪ್ರಾರಂಬಿಸಿದಾಗ ಸೌಲ ಯೋನಾತಾನರ ಹೊರತು, ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಭರ್ಜಿಯಾಗಲಿ ಇರಲಿಲ್ಲ.
23
ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 14 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31