bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Samuel 15
1 Samuel 15
Kannada Bible (KNCL) BSI 2016
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 16 →
1
ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು;
2
“ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದರು. ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.
3
ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.
4
ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ, ಲೆಕ್ಕ ತೆಗೆದನು. ಅದರಲ್ಲಿ ಎರಡು ಲಕ್ಷಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತುಸಾವಿರ ಮಂದಿ ಇದ್ದರು.
5
ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೇ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.
6
ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
7
ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.
8
ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.
9
ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.
10
ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು.
12
ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.
13
ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.
14
ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತಿದೆ, ದನಗಳ ಶಬ್ದವು ನನಗೆ ಕೇಳಿಸುತ್ತಿದೆ,” ಎಂದನು.
15
ಸೌಲನು, “ಜನರು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಸಲ್ಲಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು,” ಎಂದು ಉತ್ತರಕೊಟ್ಟನು.
16
ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು,
17
“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.
18
ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು.
19
ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು.
20
ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದದುತಂದೆ.
21
ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಗಿಲ್ಗಾಲಿನಲ್ಲಿ ಬಲಿಯರ್ಪಣೆ ಮಾಡುವುದಕ್ಕಾಗಿ ಉಳಿಸಿತಂದರು,” ಎಂದು ಉತ್ತರಕೊಟ್ಟನು.
22
ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ.
23
ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.
24
ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.
25
ದಯವಿಟ್ಟು ನನ್ನ ಪಾಪವನ್ನು ಕ್ಷಮಿಸಿ; ನಾನು ಸರ್ವೇಶ್ವರನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಅವನನ್ನು ಬೇಡಿಕೊಂಡನು.
26
ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.
27
ಆದರೆ ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.
28
ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.
29
ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.
30
ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.
31
ಆಗ ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲೇ ಹೋದನು. ಸೌಲನು ದೇವರನ್ನು ಆರಾಧಿಸಿದನು.
32
ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
33
ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.
34
ಅನಂತರ ಸಮುವೇಲನು ರಾಮಾಕ್ಕೆ ಹೋದನು; ಇತ್ತ ಸೌಲನು ತನ್ನ ಊರಾದ ಗಿಬೆಯದಲ್ಲಿದ್ದ ಮನೆಗೆ ತೆರಳಿದನು.
35
ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31