bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Samuel 20
1 Samuel 20
Kannada Bible (KNCL) BSI 2016
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 21 →
1
ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.
2
ಯೋನಾತಾನನು ಅವನಿಗೆ, “ಇದು ಎಂದಿಗೂ ಆಗಲೇಬಾರದು; ನಿನಗೆ ಮರಣವಾಗಕೂಡದು. ನನ್ನ ತಂದೆ ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವುದಿಲ್ಲ; ಇಂಥ ಕಾರ್ಯವನ್ನು ನನಗೆ ಹೇಗೆ ಮರೆಮಾಡಿಯಾರು? ಇಲ್ಲ, ಇದು ನಿಜವಲ್ಲ,” ಎಂದು ಹೇಳಿದನು.
3
ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.
4
ಆಗ ಯೋನಾತಾನನು ದಾವೀದನಿಗೆ, “ನಾನು ನಿನಗಾಗಿ ಏನು ಮಾಡಬೇಕು ಹೇಳು, ಮಾಡುತ್ತೇನೆ,” ಎಂದನು.
5
ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
6
ನಿನ್ನ ತಂದೆ ನನ್ನನ್ನು ಕುರಿತು ವಿಚಾರಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೆತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕ ಬಲಿದಾನ ಮಾಡುತ್ತಾರಂತೆ,’ ಎಂದು ಹೇಳು.
7
ಅವರು ‘ಹಾಗೆಯೇ ಆಗಲಿ’ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವರಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.
8
ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು.
9
ಯೋನಾತಾನನು ಅವನಿಗೆ, “ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ನಾನು ತಿಳಿಸದಿರುವೆನೇ?” ಎಂದನು.
10
ದಾವೀದನು, “ನಿನ್ನ ತಂದೆ ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ನನಗೆ ತಿಳಿಸುವೆ?” ಎಂದು ಅವನನ್ನು ಕೇಳಿದನು.
11
ಯೋನಾತಾನನು ಅವನಿಗೆ, “ನಾವು ಅಡವಿಗೆ ಹೋಗೋಣ ಬಾ,” ಎಂದು ಹೇಳಿದನು.
12
ಅವರಿಬ್ಬರೂ ಅಡವಿಗೆ ಹೋದರು. ಅಲ್ಲಿ ಯೋನಾತಾನನು ದಾವೀದನಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರನೇ ಸಾಕ್ಷಿ! ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ, ನಿನ್ನ ಮೇಲೆ ಅವರಿಗೆ ದಯೆಯುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.
13
ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.
14
ನೀನು ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿ ಜೀವಮಾನದುದ್ದಕ್ಕೂ ನನಗೆ ಕೃಪೆತೋರಿಸು;
15
ನಾನು ಸತ್ತನಂತರ ನನ್ನ ಮನೆಯ ಮೇಲೂ ಶಾಶ್ವತವಾಗಿ ನಿನ್ನ ದಯೆಯಿರಲಿ. ಸರ್ವೇಶ್ವರ ನಿನ್ನ ಶತ್ರುಗಳನ್ನೆಲ್ಲ ಭೂಮಿಯಿಂದ ತೆಗೆದುಹಾಕಿದ ಮೇಲೂ ಅದು ನನ್ನ ಮನೆಯಿಂದ ಅಗಲದಿರಲಿ.
16
ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.
17
ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಾ ಇದ್ದುದರಿಂದ, ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.
18
ಯೋನಾತಾನನು ದಾವೀದನಿಗೆ, “ನಾಳೆಶುದ್ಧಪಾಡ್ಯಮಿ; ನಿನ್ನ ಸ್ಥಳ ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
19
ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.
20
ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೆ ಅವುಗಳನ್ನು ತರುವುದಕ್ಕಾಗಿ ನನ್ನ ಆಳನ್ನು ಕಳುಹಿಸುವೆನು.
21
ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ; ಸರ್ವೇಶ್ವರನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವೆ.
22
ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ,’ ಎಂದು ಹೇಳಿದರೆ ಹೊರಟುಹೋಗು. ನೀನು ಹೋಗುವುದೇ ಸರ್ವೇಶ್ವರನ ಚಿತ್ತ.
23
ನಮ್ಮಿಬ್ಬರ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ನಿತ್ಯಸಾಕ್ಷಿಯಾಗಿರುವರು,” ಎಂದನು.
24
ದಾವೀದನು ಅಡವಿಯಲ್ಲಿ ಅಡಗಿಕೊಂಡನು.
25
ಅರಸನು ಶುದ್ಧಪಾಡ್ಯಮಿಯ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅವನ ಪಾರ್ಶ್ವದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳ ಬರಿದಾಗಿರುವುದನ್ನು ಕಂಡರೂ
26
ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು.
27
ಮರುದಿವಸದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ, ದಾವೀದನ ಸ್ಥಾನ ಬರಿದಾಗಿದ್ದುದರಿಂದ ಸೌಲನು, “ಜೆಸ್ಸೆಯನ ಮಗ ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಮಗ ಯೋನಾತಾನನನ್ನು ಕೇಳಿದನು.
28
ಅದಕ್ಕೆ ಯೋನಾತಾನನು, “ದಾವೀದನು, ಬೆತ್ಲೆಹೇಮಿನಲ್ಲಿ ತಮ್ಮ ಗೋತ್ರದವರು ಬಲಿದಾನ ಮಾಡುತ್ತಾರೆ;
29
ತನ್ನ ಅಣ್ಣ ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ತಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರಲು ಅಪ್ಪಣೆಯಾಗಬೇಕು, ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಆದುದರಿಂದ ಅವನು ಅರಸರ ಪಂಕ್ತಿಗೆ ಬರಲಿಲ್ಲ,” ಎಂದು ಉತ್ತರಕೊಟ್ಟನು.
30
ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ.
31
ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.
32
ಅದಕ್ಕೆ ಯೋನಾತಾನನು, “ಅವನು ಏಕೆ ಸಾಯಬೇಕು? ಅವನು ಏನು ಮಾಡಿದ್ದಾನೆ?” ಎಂದು ತಂದೆಯನ್ನು ಕೇಳಿದನು.
33
ಕೂಡಲೆ ಸೌಲನು ಅವನನ್ನು ತಿವಿಯುವವನಂತೆ ಈಟಿಯನ್ನೆಸೆದನು. ತನ್ನ ತಂದೆ ನಿಜವಾಗಿಯೂ ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನನಿಗೆ ಅರಿವಾಯಿತು.
34
ಅವನು ಬಲುಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆ, ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟಮಾಡಲೇ ಇಲ್ಲ.
35
ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಅಡವಿಗೆ ಹೋದನು.
36
ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ,” ಎಂದು ಹೇಳಿದನು. ಆ ಹುಡುಗ ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.
37
ಹುಡುಗನು ಬಾಣಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಗಟ್ಟಿಯಾಗಿ ಅವನಿಗೆ, “ಬಾಣ ಇನ್ನೂ ಆಚೆ ಬಿದ್ದಿದೆ.
38
ಬೇಗ ಓಡು, ನಿಲ್ಲಬೇಡ,” ಎಂದು ಕೂಗಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.
39
ಇದರ ರಹಸ್ಯ ಯೋನಾತಾನನಿಗೆ ಹಾಗು ದಾವೀದನಿಗೆ ಗೊತ್ತಾಯಿತೇ ಹೊರತು ಆ ಹುಡುಗನಿಗೆ ಗೊತ್ತಾಗಲಿಲ್ಲ.
40
ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು, “ಇವುಗಳನ್ನು ಊರಿಗೆ ತೆಗೆದುಕೊಂಡು ಹೋಗು,” ಎಂದು ಹೇಳಿದನು.
41
ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.
42
ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31