bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Samuel 30
1 Samuel 30
Kannada Bible (KNCL) BSI 2016
← Chapter 29
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 31 →
1
ದಾವೀದನೂ ಅವನ ಜನರೂ ಮಾರನೆಯ ದಿನ ಚಿಕ್ಲಗ್ ಊರನ್ನು ಸೇರಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿದ್ದರು.
2
ಅದರಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿ ಇದ್ದರು; ಆದರೆ ಯಾರನ್ನೂ ಕೊಂದಿರಲಿಲ್ಲ.
3
ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಟ್ಟುಹೋಗಿರುವುದನ್ನೂ ತಮ್ಮ ಹೆಂಡತಿಯರೂ ಗಂಡು-ಹೆಣ್ಣು ಮಕ್ಕಳೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.
4
ದುಃಖ ತಾಳಲಾಗದೆ ದೀರ್ಘಕಾಲ ಅತ್ತು ಗೋಳಾಡಿದರು.
5
ದಾವೀದನ ಇಬ್ಬರು ಹೆಂಡತಿಯರಾದ ಜೆಸ್ರೀಲಿನವಳಾದ ಅಹೀನೋವಮಳು ಮತ್ತು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಕೂಡ ಸೆರೆಯಾಗಿ ಹೋಗಿದ್ದರು.
6
ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.
7
ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.
8
ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.
9
ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದರು.
10
ಆಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟರು. ಆದ್ದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.
11
ಅವನ ಜನರು ಅಡವಿಯಲ್ಲಿ ಒಬ್ಬ ಈಜಿಪ್ಟಿನವನು ಬಿದ್ದಿರುವುದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿದರು.
12
ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿಂದು ಚೇತರಿಸಿಕೊಂಡನು.
13
ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು? ಎಲ್ಲಿಯವನು?” ಎಂದು ಕೇಳಿದನು. ಆಗ ಅವನು, “ನಾನು ಈಜಿಪ್ಟಿನವನು; ಒಬ್ಬ ಅಮಾಲೇಕ್ಯನ ಗುಲಾಮನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದ್ದರಿಂದ ನನ್ನ ಯಜಮಾನ ನನ್ನನ್ನು ಬಿಟ್ಟುಹೋದನು.
14
ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.
15
ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯಾ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು, ಆ ಗುಂಪಿನವರ ಬಳಿಗೆ ಕರೆದುಕೊಂಡು ಹೋಗುವೆನು,” ಎಂದನು.
16
ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.
17
ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
18
ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಹಾಗು ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನು ಬಿಡಿಸಿಕೊಂಡನು.
19
ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು-ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ, ಎಲ್ಲವನ್ನೂ ತೆಗೆದುಕೊಂಡು ಬಂದನು.
20
ಇದಲ್ಲದೆ, ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ,” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಸಮೇತ ಹೊಡೆದುಕೊಂಡು ಬಂದರು.
21
ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು.
22
ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಮಡದಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ,” ಎಂದರು.
23
ಆಗ ದಾವೀದನು ಅವರಿಗೆ, “ಸಹೋದರರೇ, ಸರ್ವೇಶ್ವರ ನಮ್ಮನ್ನು ಕಾಪಾಡಿ, ನಮಗೆ ವಿರುದ್ಧ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ, ನಮಗೆ ಇಷ್ಟನ್ನೆಲ್ಲಾ ಅನುಗ್ರಹಿಸಿದ ಮೇಲೆ ನೀವು ಹೀಗೆ ಮಾಡಬಾರದು.
24
ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.
25
ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.
26
ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು.
27
ಹೀಗೆ ಬಹುಮಾನ ಪಡೆದವರು ಇವರು: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,
28
ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು,
29
ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,
30
ಹೊರ್ಮದವರು, ಬೋರಾಷಾನಿನವರು, ಅತಾಕಿನವರು, ಹೆಬ್ರೋನಿನವರು
31
ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು.
← Chapter 29
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 31 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31