bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
1 Samuel 9
1 Samuel 9
Kannada Bible (KNCL) BSI 2016
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 10 →
1
ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ.
2
ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು.
3
ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು,” ಎಂದು ಹೇಳಿದನು.
4
ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗು ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.
5
ಕಡೆಗೆ ಅವರು ಚೂಫ್ ನಾಡಿಗೆ ಬಂದರು. ಅಲ್ಲಿ ಅವನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡೆ; ನಮ್ಮ ತಂದೆ ಈ ಕತ್ತೆಗಳ ಚಿಂತೆಯನ್ನೇ ಬಿಟ್ಟು ನಮ್ಮ ಚಿಂತೆಯಲ್ಲಿ ಇರಬಹುದು,” ಎಂದನು.
6
ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.
7
ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿ ಮುಗಿದುಹೋಯಿತು. ಆ ದೈವಪುರುಷನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿ ಇಲ್ಲವಲ್ಲಾ;
8
ಏನು ಕೊಡುವುದು?” ಎನ್ನಲು ಆ ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯವಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು,” ಎಂದು ಉತ್ತರಕೊಟ್ಟನು.
9
(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)
10
ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು, ಹೋಗೋಣ, ನಡೆ,” ಎಂದನು.
11
ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.
12
“ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;
13
ಅವರು ಬಲಿಭೋಜನಕ್ಕಾಗಿ ಗುಡ್ಡಕ್ಕೆ ಹೋಗುವ ಮೊದಲೇ ನೀವು ಊರೊಳಕ್ಕೆ ಹೋದರೆ ಸಿಕ್ಕುವರು. ಅವರು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಅವರು ಹೋಗಿ ಬಲಿ ಆಹಾರವನ್ನು ಆಶೀರ್ವದಿಸುತ್ತಾರೆ; ಅನಂತರವೇ ಆಮಂತ್ರಿತರು ಊಟಮಾಡುವುದು. ಈಗಲೇ ಹೋಗಿ; ಅವನು ಸಿಕ್ಕುವ ಸಮಯ ಇದೇ,” ಎಂದರು ಆ ಮಹಿಳೆಯರು.
14
ಅವರು ಗುಡ್ಡ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೊರಟು ಅವರೆದುರಿಗೆ ಬಂದನು.
15
ಸೌಲನು ಬರುವುದಕ್ಕೆ ಒಂದು ದಿವಸ ಮುಂದಾಗಿಯೇ ಸರ್ವೇಶ್ವರ ಸಮುವೇಲನಿಗೆ,
16
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.
17
ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ, “ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು,” ಎಂದು ಸೂಚಿಸಿದರು.
18
ಊರಬಾಗಿಲಿಗೆ ಬಂದ ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ, “ದಾರ್ಶನಿಕರ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿರಾ?’ ಎಂದನು.
19
ಸಮುವೇಲನು, “ನಾನೇ ಆ ದಾರ್ಶನಿಕ; ನೀನು ನನ್ನ ಜೊತೆ ಗುಡ್ಡಕ್ಕೆ ಬಾ; ನೀನು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.
20
ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ; ಅವು ಈಗಾಗಲೇ ಸಿಕ್ಕಿವೆ. ಮತ್ತು ಇಸ್ರಯೇಲರ ಆಶೋತ್ತರವೆಲ್ಲ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೇ?” ಎಂದನು.
21
ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.
22
ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು. ಬಲಿಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,
23
“ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು,” ಎನ್ನಲು,
24
ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಸಮುವೇಲನು ಸೌಲನಿಗೆ, “ಇಗೋ, ಇದು ನಿನಗಾಗಿ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಬಲಿಭೋಜನಕ್ಕೆ ಕರೆದಾಗಿನಿಂದ ಇದು ನಿನಗಾಗಿಯೇ ಪ್ರತ್ಯೇಕವಾಗಿ ಇಡಲಾಗಿತ್ತು,” ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.
25
ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.
26
ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಸಾಗಕಳಿಸುತ್ತೇನೆ,” ಎಂದು ಎಬ್ಬಿಸಲು, ಅವನೆದ್ದನು. ತರುವಾಯ ಅವರು ಇಬ್ಬರೂ ಹೊರಟು ಊರಹೊರಗೆ ಬಂದಾಗ ಸಮುವೇಲನು ಸೌಲನಿಗೆ,
27
“ನಿನ್ನ ಸೇವಕನನ್ನು ಮುಂದೆ ಕಳುಹಿಸಿ, ನೀನು ಇಲ್ಲೇ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು,” ಎಂದನು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31