bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Chronicles 17
2 Chronicles 17
Kannada Bible (KNCL) BSI 2016
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 18 →
1
ಆಸನಿಗೆ ಅನಂತರ ಅವನ ಮಗ ಯೇಹೋಷಾಫಾಟನು ಅರಸನಾದನು. ಇಸ್ರಯೇಲರಿಂದ ಅಪಾಯವಾಗದಂತೆ ಇವನು ತನ್ನನ್ನೇ ಭದ್ರಪಡಿಸಿಕೊಂಡನು.
2
ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.
3
ಬಾಳ್ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು.
4
ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.
5
ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.
6
ಇವನು ಸರ್ವೇಶ್ವರನ ಮಾರ್ಗದಲ್ಲಿ ನಡೆದು, ಧೈರ್ಯದಿಂದ ಜುದೇಯ ನಾಡಿನಲ್ಲಿದ್ದ ಪೂಜಾಸ್ಥಳಗಳನ್ನೂ ಆಶೇರ ವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.
7
ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಸರದಾರರಾದ ಬೆನ್ಹೈಲ್, ಓಬದ್ಯ, ಜೆಕರ್ಯ, ನೆತನೇಲ್, ಮೀಕಾಯ ಇವರನ್ನೂ
8
ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕಾಗಿ ಜುದೇಯ ನಾಡಿನ ಪಟ್ಟಣಗಳಿಗೆ ಕಳುಹಿಸಿದನು.
9
ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.
10
ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.
11
ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು.
12
ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಜುದೇಯ ನಾಡಿನಲ್ಲಿ ಕೋಟೆಗಳನ್ನು ಮತ್ತು ಉಗ್ರಾಣದ ಪಟ್ಟಣಗಳನ್ನು ಕಟ್ಟಿಸಿದನು.
13
ಜುದೇಯದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಯಿತ್ತು. ಜೆರುಸಲೇಮಿನಲ್ಲಿ ರಣವೀರರಾದ ಯೋಧರು ಇದ್ದರು:
14
ಗೋತ್ರಗಳ ಪ್ರಕಾರ ಲೆಕ್ಕಿತರಾದ ಈ ಸೇನಾನಾಯಕರ ಕ್ರಮಬದ್ಧ ಪಟ್ಟಿಯಿದು; ಅದ್ನ - ಇವನು ಯೆಹೂದ್ಯರಲ್ಲಿ ಮೂರು ಲಕ್ಷಮಂದಿ ರಣವೀರರ ಅಧಿಪತಿ;
15
ಯೆಹೋಹಾನಾನ್ - ಇವನು ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ರಣವೀರರ ಅಧಿಪತಿ;
16
ಅಮಸ್ಯ - ಜಿಕ್ರಿಯ ಮಗನಾದ ಇವನು ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಛೆಯಿಂದ ತನ್ನನ್ನೇ ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಂಡಿದ್ದನು;
17
ಎಲ್ಯಾದ - ಇವನು ಬೆನ್ಯಾಮೀನರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕ ಹಾಗೂ ರಣವೀರ;
18
ಯೆಹೋಜಾಬಾದ್ - ಇವನು ಒಂದು ಲಕ್ಷ ಎಂಬತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕ.
19
ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿದ್ದ ಈ ಯೋಧರಲ್ಲದೆ ಕೋಟೆಕೊತ್ತಲಗಳಿದ್ದ ಬೇರೆ ಪಟ್ಟಣಗಳಲ್ಲಿಯೂ ಸೈನಿಕರಾಗಿ ಇದ್ದರು.
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 18 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36