bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Chronicles 18
2 Chronicles 18
Kannada Bible (KNCL) BSI 2016
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 19 →
1
ಯೆಹೋಷಾಫಾಟನಿಗೆ ಧನಘನತೆ ಬಹಳವಾಗಿತ್ತು. ಅವನು ಆಹಾಬನೊಡನೆ ಬೀಗತನಮಾಡಿ ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರಿಯಕ್ಕೆ ಹೋದನು.
2
ಆಹಾಬನು ಅವನಿಗೂ ಅವನೊಡನೆ ಬಂದ ಜನರಿಗೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣವನ್ನೇರ್ಪಡಿಸಿದನು. ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಲು ತನ್ನ ಸಂಗಡ ಬರಬೇಕೆಂದು ಅವನನ್ನು ಪ್ರೇರಿಸಿದನು.
3
ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.
4
ಅನಂತರ, “ಸರ್ವೇಶ್ವರನ ಸನ್ನಿಧಿಯಲ್ಲಿ ಈ ಬಗ್ಗೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಕೇಳಿಕೊಂಡನು.
5
ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?\, ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು.
6
ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿ ಇಲ್ಲವೇ?” ಎಂದು ಕೇಳಿದನು. ಅವನು,
7
“ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿ ಇರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗೆನ್ನಬಾರದು,” ಎಂದನು.
8
ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು.
9
ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು; ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.
10
ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.
11
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ಗಿಲ್ಯಾದಿಗೆ ಹೋಗಿ, ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.
12
ಇತ್ತ ಮೀಕಾಯೆಹುವನ್ನು ಕರೆಯಲು ಬಂದಿದ್ದ ದೂತನು, “ನೋಡಿ ಎಲ್ಲ ಪ್ರವಾದಿಗಳು ಏಕ ಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ. ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.
13
ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.
14
ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವನು “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶವಾಗುವರು,” ಎಂದು ಹೇಳಿದನು.
15
ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
16
ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಯೊಳಗೆ ಹೋಗಲಿ ಎಂದರು,” ಎಂಬುದಾಗಿ ಉತ್ತರ ಕೊಟ್ಟನು.
17
ಆಗ ಇಸ್ರಯೇಲರ ಅರಸು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.
18
ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.
19
ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, ‘ಇಸ್ರಯೇಲರ ಅರಸ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರೇಪಿಸಬಲ್ಲಿರಿ?’ ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
20
ಕಡೆಗೆ ಒಂದು ಆತ್ಮ ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು,
21
‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು’, ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ ಅದಕ್ಕೆ, ‘ಹೋಗಿ ಅದರಂತೆಯೇ ಮಾಡು; ಅವನನ್ನು ಪ್ರೇರೇಪಿಸಿ ಸಫಲನಾಗುವೆ’, ಎಂದರು.
22
ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನೇ ಕಳುಹಿಸಿದ್ದಾರೆ,” ಎಂದು ಹೇಳಿದನು.
23
ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಮೀಕಾಯೆಹುವು,
24
“ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು,” ಎಂದು ಉತ್ತರಕೊಟ್ಟನು.
25
ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ; ಅವರಿಗೆ,
26
‘ನಾನು, ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸರು ಹೇಳಿದ್ದಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು.
27
ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ, ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.
28
ಇಸ್ರಯೇಲರ ಅರಸನು ಹಾಗೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಮೋತ್ಗಿಲ್ಯಾದಿಗೆ ವಿರುದ್ಧ ಯುದ್ಧಕ್ಕೆ ಹೊರಟರು.
29
ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, ‘ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ,” ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.
30
ಸಿರಿಯಾದವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿಯಿಡಿ\, ಎಂದು ಆಜ್ಞಾಪಿಸಿದನು.
31
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.
32
ಅವನು ಇಸ್ರಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
33
ಸಿರಿಯಾದವರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿ ಇದೆ,” ಎಂದು ಹೇಳಿದನು.
34
ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಇಸ್ರಯೇಲರ ಅರಸನು ಸಾಯಂಕಾಲದವರೆಗೂ ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು.ಸೂರ್ಯಾಸ್ತಮಾನವಾದಾಗ ಅವನು ಸತ್ತನು.
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
Recommended Reading
Commentary
2 Chronicles Commentaries
→
Devotional
2 Chronicles Devotional Guide
→
Get This Bible
KNCL Study Bible
→