bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Chronicles 23
2 Chronicles 23
Kannada Bible (KNCL) BSI 2016
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 24 →
1
ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು.
2
ಇವರು ಜುದೇಯದಲ್ಲೆಲ್ಲಾ ಸಂಚರಿಸಿ ಎಲ್ಲ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಯೇಲರ ಗೋತ್ರಪ್ರಧಾನರನ್ನೂ ಕೂಡಿಸಿದರು. ಅವರೆಲ್ಲರು ಜೆರುಸಲೇಮಿಗೆ ಬಂದರು.
3
ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.
4
ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.
5
ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.
6
ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.
7
ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು,” ಎಂದು ಹೇಳಿದನು.
8
ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.
9
ದೇವಾಲಯದಲ್ಲಿಟ್ಟಿದ್ದ ದಾವೀದ ಅರಸನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
10
ಆಯುಧಪಾಣಿಗಳಾದ ಎಲ್ಲ ಜನರನ್ನು ಅರಸನ ಸುತ್ತಲು ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.
11
ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
12
ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.
13
ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
14
ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.
15
ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಿಲಿನ ತನಕ ಒಯ್ದು, ಅಲ್ಲಿ ಕೊಂದರು.
16
ಅನಂತರ ಯೆಹೋಯಾದನು ಎಲ್ಲ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಸರ್ವೇಶ್ವರನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.
17
ತರುವಾಯ ಜನರೆಲ್ಲರೂ ಬಾಳ್ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಮುಂದೆಯೇ ಕೊಂದರು; ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗೂ ವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು.
18
ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.
19
ಯಾವ ವಿಧದಲ್ಲಾದರೂ ಅಶುದ್ಧನಾದವನು ಸರ್ವೇಶ್ವರನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
20
ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
21
ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36