bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Chronicles 34
2 Chronicles 34
Kannada Bible (KNCL) BSI 2016
← Chapter 33
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 35 →
1
ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.
2
ಅವನು ಎಡಕ್ಕಾಗಲಿ ಬಲಕ್ಕಾಗಲಿ ಹೋಗದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲೇ ನೇರವಾಗಿ ಸರ್ವೇಶ್ವರನ ಚಿತ್ತಾನುಸಾರ ನಡೆದನು.
3
ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.
4
ಇದಲ್ಲದೆ, ಅವನು ಬಾಳ್ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
5
ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಬಲಿಪೀಠಗಳ ಮೇಲೆ ಸುಡಿಸಿ, ಜುದೇಯದ ಮತ್ತು ಜೆರುಸಲೇಮಿನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು.
6
ಮನಸ್ಸೆ, ಎಫ್ರಯಿಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಊರುಗಳ ಸುತ್ತಲು ಹಾಳುಬೀಳುಗಳಲ್ಲಿದ್ದ ಬಲಿಪೀಠಗಳನ್ನು ಕೆಡವಿಸಿದನು;
7
ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.
8
ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು.
9
ಇವರು ಮಹಾಯಾಜಕ ಹಿಲ್ಕೀಯನ ಬಳಿಗೆ ಹೋಗಿ, ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು, ಅಂದರೆ, ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಯಿಮ್ ಮುಂತಾದ ಇಸ್ರಯೇಲ್ಕುಲಗಳಲ್ಲಿ ಉಳಿದವರಿಂದ ಎಲ್ಲ ಯೆಹೂದ ಬೆನ್ಯಾಮೀನ್ಯರಿಂದ ಹಾಗು ಜೆರುಸಲೇಮಿನವರಿಂದ ಸಂಗ್ರಹಿಸಿದ್ದ ಹಣವನ್ನು
10
ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು
11
ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳಲು ಹಾಗು ಜುದೇಯ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಕಟ್ಟಲು, ಅಂತು ದೇವಾಲಯವನ್ನು ದುರಸ್ತಿಮಾಡಿ ಭದ್ರಪಡಿಸಲು ಬಡಗಿಗಳಿಗೂ ಶಿಲ್ಪಿಗಳಿಗೂ ಆ ಹಣವನ್ನು ಕೊಟ್ಟರು.
12
ಕೆಲಸಗಾರರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ, ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.
13
ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನೋಡಿಕೊಳ್ಳುತ್ತಿದ್ದರು; ಎಲ್ಲ ಲೇಖಕರು, ಅಧಿಕಾರಿಗಳು ಹಾಗು ದ್ವಾರಪಾಲಕರು ಲೇವಿಯರೇ ಆಗಿದ್ದರು.
14
ಸರ್ವೇಶ್ವರನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರ ಕೊಡಲಾಗಿದ್ದ ಸರ್ವೇಶ್ವರನ ಧರ್ಮೋಪದೇಶದ ಗ್ರಂಥವು ಯಾಜಕ ಹಿಲ್ಕೀಯನಿಗೆ ಸಿಕ್ಕಿತು.
15
ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿದೆ,” ಎಂದು ಹೇಳಿ ಅದನ್ನು ಅವನ ಕೈಗೆ ಕೊಟ್ಟನು.
16
ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀವು ಆಜ್ಞಾಪಿಸಿದ್ದೆಲ್ಲವನ್ನೂ ನಿಮ್ಮ ಸೇವಕರು ಮಾಡುತ್ತಿದ್ದಾರೆ.
17
ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಮೇಸ್ತ್ರಿಗಳಿಗೂ ಕೆಲಸಮಾಡುವವರಿಗೂ ಒಪ್ಪಿಸಿದ್ದಾರೆ,” ಎಂದು ತಿಳಿಸಿದನು.
18
ಇದಲ್ಲದೆ, ಲೇಖಕ ಶಾಫಾನನು ಅರಸನಿಗೆ, “ಯಾಜಕ ಹಿಲ್ಕೀಯ ನನಗೊಂದು ಗ್ರಂಥವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
19
ಅರಸ ಯೋಷೀಯನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ,
20
“ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡನು. ಹಿಲ್ಕೀಯ, ಶಾಫಾನನ ಮಗ ಅಹೀಕಾಮ್, ಮೀಕನ ಮಗ ಅಬ್ದೋನ್, ಲೇಖಕ ಶಾಫಾನ್, ಸಹಕಾರಿಯಾದ ಅಸಾಯ ಎಂಬುವರಿಗೆ,
21
“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.
22
ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಅಪ್ಪಣೆಯಾದಂತೆ ಆಕೆಯ ಬಳಿ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡ. ಆಕೆ ಜೆರುಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.
23
ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಈ ಮಾತುಗಳನ್ನು ತಿಳಿಸಿರಿ:
24
‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;
25
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.
26
ತಾನು ಕೇಳಿದ ವಾಕ್ಯಗಳ ಬಗ್ಗೆ, ಸರ್ವೇಶ್ವರನ ಬಳಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ: ‘ಇಸ್ರಯೇಲ್ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ;
27
ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು
28
ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
29
ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯದ ಎಲ್ಲ ಹಿರಿಯರನ್ನು ಕೂಡಿಸಿದನು.
30
ಜೆರುಸಲೇಮಿನವರನ್ನು, ಬೇರೆ ಎಲ್ಲ ಯೆಹೂದ್ಯರನ್ನು, ಯಾಜಕರನ್ನು ಹಾಗು ಲೇವಿಯರನ್ನು ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ದೊಡ್ಡವರೂ ಚಿಕ್ಕವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು.
31
ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.
32
ಅಂತೆಯೇ ಎಲ್ಲ ಜೆರುಸಲೇಮಿನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಜೆರುಸಲೇಮಿನವರು ಏಕದೇವರಾದ ತಮ್ಮ ಪೂರ್ವಜರ ದೇವರ ನಿಬಂಧನೆಯನ್ನು ಕೈಕೊಳ್ಳುವಂಥವರಾದರು.
33
ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.
← Chapter 33
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 35 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
Recommended Reading
Commentary
2 Chronicles Commentaries
→
Devotional
2 Chronicles Devotional Guide
→
Get This Bible
KNCL Study Bible
→