bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Chronicles 4
2 Chronicles 4
Kannada Bible (KNCL) BSI 2016
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 5 →
1
ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,
2
ಅನಂತರ ಅವನು ‘ಕಂಚಿನ ಕಡಲು’ ಎನಿಸಿಕೊಳ್ಳುವ ಎರಕದ ಒಂದು ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,
3
ಅದನ್ನು ಎರಕಹೊಯ್ಯುವಾಗ ಅದರ (ಅಂಚಿನ) ಕೆಳಗೆ ಸುತ್ತಲೂ ಮೊಳಕ್ಕೆ ಹತ್ತರಂತೆ ಹೋರಿಗಳ ಚಿತ್ರಗಳನ್ನು ಎರಡು ಸಾಲಾಗಿ ಎರಕ ಹೊಯ್ಸಿದನು.
4
ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮ ದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಕಂಚಿನ ಕಡಲು ಅವುಗಳ ಬೆನ್ನಿನ ಮೇಲಿತ್ತು. ಅವುಗಳ ಹಿಂಭಾಗವು ಒಳಗಡೆಗಿತ್ತು.
5
ಆ ಪಾತ್ರೆಯ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಅರವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.
6
ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು.
7
ಅದೂ ಅಲ್ಲದೆ ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ, ಐದನ್ನು ದೇವಾಲಯದೊಳಗೆ ಬಲಗಡೆಯಲ್ಲೂ ಐದನ್ನು ಎಡಗಡೆಯಲ್ಲೂ ಇಡಿಸಿದನು.
8
ಹತ್ತು ಮೇಜುಗಳನ್ನು ಮಾಡಿಸಿ ದೇವಾಲಯದೊಳಗೆ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇಡಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
9
ಮತ್ತೆ, ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಾಡಿಸಿ ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಇಟ್ಟನು. ಅವುಗಳ ಕದಗಳನ್ನು ಕಂಚಿನ ತಗಡಿನಿಂದ ಹೊದಿಸಿದನು.
10
ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ, ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.
11
ಇದಲ್ಲದೆ, ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಈ ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಸಾಮಾನುಗಳು ಇವು:
12
ಎರಡು ಕಂಬಗಳು, ಅವುಗಳ ಮೇಲಣ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕಾಗಿ ಎರಡು ಜಾಲರಿಗಳು,
13
ಕಂಬಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕಾಗಿ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,
14
ಅವುಗಳ ಮೇಲಣ ಬಾನೆಗಳು, ಕಡಲಕೊಳ ಎನಿಸಿಕೊಳ್ಳುವ ಎರಕದ ಪಾತ್ರೆ,
15
ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
16
ಹಂಡೆ, ಸಲಿಕೆ ಹಾಗೂ ಮುಳ್ಳು, ಹೀಗೆ ಹೂರಾಮಾಬೀಮನು ಅರಸ ಸೊಲೊಮೋನನ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ಕಂಚಿನಿಂದ ಮಾಡಿ ಮುಗಿಸಿದನು.
17
ಅರಸನು ಜೋರ್ಡನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯಲ್ಲಿ ಎರಕ ಹೊಯ್ಸಿದನು.
18
ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.
19
ಅವನು ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿ ಇವು: ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,
20
ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,
21
ಉತ್ಕೃಷ್ಟವಾದ ಬಂಗಾರದಿಂದ ಮಾಡಿದ ಅವುಗಳ ಹಣತೆ, ತಂಡಸ,
22
ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36