bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 23
2 Kings 23
Kannada Bible (KNCL) BSI 2016
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 24 →
1
ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.
2
ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
3
ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.
4
ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
5
ಅದಲ್ಲದೆ, ಜುದೇಯ ಪ್ರಾಂತ್ಯದ ಪಟ್ಟಣಗಳಲ್ಲೂ ಜೆರುಸಲೇಮಿನ ಸುತ್ತಣ ಪ್ರದೇಶದಲ್ಲೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳ್ ದೇವತೆಗೂ ಸೂರ್ಯ ಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಾರತಿಯೆತ್ತುವುದಕ್ಕಾಗಿ ಜುದೇಯದ ರಾಜರಿಂದ ನೇಮಿತರಾಗಿದ್ದ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
6
ಸರ್ವೇಶ್ವರನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅದನ್ನು ಸುಡಿಸಿ, ಪುಡುಪುಡಿಮಾಡಿಸಿ, ಆ ಪುಡಿಯನ್ನು ಸಾರ್ವಜನಿಕ ಸ್ಮಶಾನದಲ್ಲಿ ಹಾಕಿಸಿದನು.
7
ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು.
8
ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಜುದೇಯದ ಪಟ್ಟಣಗಳ ಯಾಜಕರನ್ನೆಲ್ಲಾ ಕರೆಯಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರದೇವತೆಗಳ ಪೂಜಾ ಸ್ಥಳಗಳನ್ನು ಕೆಡವಿಬಿಟ್ಟನು.
9
ಆ ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ, ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕುತ್ತಿದ್ದರೂ ಜೆರುಸಲೇಮಿನಲ್ಲಿ ಇದ್ದ ಸರ್ವೇಶ್ವರನ ಬಲಿಪೀಠದ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.
10
ತಮ್ಮ ಗಂಡುಹೆಣ್ಣುಮಕ್ಕಳನ್ನು ಯಾರೂ ಮೋಲೆಕನಿಗಾಗಿ ಬಲಿಯಗ್ನಿಪರೀಕ್ಷೆಗೆ ಈಡುಮಾಡದಂತೆ ಬೆನ್ಹಿನ್ನೋಮ್ ಕಣಿವೆಯಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.
11
ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು.
12
ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
13
ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.
14
ಕಲ್ಲುಗಂಬಗಳನ್ನು ಒಡೆದುಹಾಕಿ, ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು, ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
15
ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.
16
ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ, ಆ ಬಲಿಪೀಠದ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು. ಹೀಗೆ ದೈವಪುರುಷನೊಬ್ಬನು ಪ್ರಕಟಿಸಿದ ಸರ್ವೇಶ್ವರನ ವಾಕ್ಯ ನೆರವೇರಿತು.
17
ಇದಲ್ಲದೆ, ಅವನು ಒಂದು ಸಮಾಧಿ ಶಿಲೆಯನ್ನು ಕಂಡು ಅದೇನೆಂದು ವಿಚಾರಿಸಿದನು. ಆ ಊರಿನವರು, “ನೀವು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ್ದ ಜುದೇಯ ನಾಡಿನವನಾದ ದೈವಪುರುಷನ ಸಮಾಧಿ ಇದು,” ಎಂದು ಉತ್ತರಕೊಟ್ಟನು.
18
ಆಗ ಅವನು, “ಬಿಡಿ, ಆ ಪುರುಷನ ಎಲುಬುಗಳನ್ನು ಯಾರೂ ಮುಟ್ಟಬಾರದು,” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರಿಯ ನಾಡಿನ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
19
ಇಸ್ರಯೇಲ್ ರಾಜರು ಸಮಾರಿಯ ಪಟ್ಟಣಗಳಲ್ಲಿ ಕಟ್ಟಿಸಿದಂಥ ಹಾಗು ಸರ್ವೇಶ್ವರನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳಲ್ಲಿದ್ದ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.
20
ಯೋಷೀಯನು ಅವುಗಳನ್ನು ಕೆಡವಿಬಿಟ್ಟು, ಅವುಗಳ ಪೂಜಾರಿಗಳನ್ನು ಬಲಿಪೀಠಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಅವುಗಳ ಮೇಲೆ ಸುಡಿಸಿ ಜೆರುಸಲೇಮಿಗೆ ಹಿಂದಿರುಗಿ ಹೋದನು.
21
ಅನಂತರ ಅರಸನು ಜನರೆಲ್ಲರಿಗೆ, ನಿಬಂಧನ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೋಸ್ಕರ ಪಾಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.
22
ಇಂಥ ಪಾಸ್ಕಹಬ್ಬವು ಇಸ್ರಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ ಇಸ್ರಯೇಲರ ಮತ್ತು ಜುದೇಯದ ಅರಸರ ಕಾಲದಲ್ಲಾಗಲಿ ನಡೆದಿರಲಿಲ್ಲ.
23
ಈ ಹಬ್ಬವನ್ನು ಅರಸ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿ ಸರ್ವೇಶ್ವರನಿಗೋಸ್ಕರ ಆಚರಿಸಲಾಯಿತು.
24
ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.
25
ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.
26
ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ.
27
ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.
28
ಯೋಷೀಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
29
ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.
30
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.
31
ಯೆಹೋವಾಹಾಜನು ಅರಸನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಆದ ಹಮೂಟಲ್ ಎಂಬಾಕೆ ಇವನ ತಾಯಿ.
32
ಇವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.
33
ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.
34
ಫರೋಹ ನೆಕೋವನು, ಯೋಷೀಯನಿಗೆ ಬದಲಾಗಿ ಅವನ ಮಗ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು, ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದನು; ಯೆಹೋವಾಹಾಜನು ಅಲ್ಲೆ ಮೃತನಾದನು.
35
ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ನಾಡಿನಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆ ಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿಬಂಗಾರವನ್ನು ನಾಡಿನ ಜನರಿಂದ ಕೂಡಿಸಿ ಫರೋಹನಿಗೆ ತಂದೊಪ್ಪಿಸಿದನು.
36
ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆ ಅವನ ತಾಯಿ.
37
ಅವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅವನ ಕಾಲದಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಬಂದನು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25