bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 25
2 Kings 25
Kannada Bible (KNCL) BSI 2016
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
1
ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.
2
ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದನು.
3
ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.
4
ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು.
5
ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು.
6
ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
7
ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
8
ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು.
9
ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
10
ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.
11
ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.
12
ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.
13
ಬಾಬಿಲೋನಿಯದವರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ, ಕಡಲಿನ ಆಕಾರದ ಕಂಚಿನ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.
14
ಅದು ಮಾತ್ರವಲ್ಲ, ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
15
ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಅಗ್ಗಿಷ್ಟಿಕೆ, ಬಟ್ಟಲು, ಮೊದಲಾದುವುಗಳನ್ನು ದೋಚಿಕೊಂಡನು.
16
ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಡಲಿನ ಆಕಾರದ ಪಾತ್ರೆ, ಚಕ್ರದ ಬಂಡಿಗಳು ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.
17
ಪ್ರತಿಯೊಂದು ಕಂಬ ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗು ದಾಳಿಂಬೆ ಹಣ್ಣುಗಳು ಇದ್ದವು.
18
ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.
19
ಸೈನ್ಯ ಸಂಬಂಧವಾದ ಎಲ್ಲ ವ್ಯವಸ್ಥೆಯನ್ನು, ನಗರದಲ್ಲಿ ಉಳಿದಿದ್ದ ಹಾಗು ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರನ್ನು ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡು ಹೋದನು.
20
ನೆಬೂಜರದಾನನು ಇವರನ್ನೆಲ್ಲ ತೆಗೆದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
21
ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.
22
ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.
23
ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.
24
ಗೆದಲ್ಯನು ಇವರಿಗೂ ಇವರ ಜನರಿಗೂ, “ಬಾಬಿಲೋನಿಯಾದ ಸೈನ್ಯದವರಿಗೆ ಹೆದರಬೇಡಿ; ಬಾಬಿಲೋನಿನ ಅರಸನಿಗೆ ಅಧೀನರಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಶುಭವಾಗುವುದು,” ಎಂದು ಆಣೆಯಿಟ್ಟು ಹೇಳಿದನು.
25
ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.
26
ಆಗ ಚಿಕ್ಕವರು, ದೊಡ್ಡವರು, ಸೇನಾಪತಿಗಳು, ಎಲ್ಲರು ಬಾಬಿಲೋನಿಯಾದವರಿಗೆ ಹೆದರಿ ಈಜಿಪ್ಟಿಗೆ ಓಡಿಹೋದರು.
27
ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು.
28
ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೇ ಉನ್ನತ ಸ್ಥಾನವನ್ನು ಕೊಟ್ಟನು.
29
ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ, ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.
30
ಅವನ ಜೀವಿತಕಾಲವೆಲ್ಲ, ಅವನಿಗೆ ಬೇಕಾಗಿ ಇದ್ದ ಎಲ್ಲ ಪದಾರ್ಥಗಳು ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25