bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 3
2 Kings 3
Kannada Bible (KNCL) BSI 2016
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 4 →
1
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹನ್ನೆರಡು ವರ್ಷ ಆಳಿದನು.
2
ಇವನು ತನ್ನ ತಂದೆ ತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳ್ ದೇವತೆಯ ಗೌರವಾರ್ಥ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.
3
ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
4
ಅನೇಕ ಕುರಿಹಿಂಡುಗಳುಳ್ಳವನಾಗಿದ್ದ ಮೋವಾಬ್ಯರ ಅರಸ ಮೇಷನೆಂಬವನು ಇಸ್ರಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
5
ಆದರೆ ಅಹಾಬನು ಮರಣ ಹೊಂದಿದ ನಂತರ ಇವನು ಇಸ್ರಯೇಲರ ಅರಸನಿಗೆ ವಿರುದ್ಧ ದಂಗೆಯೆದ್ದನು.
6
ಆದುದರಿಂದ ಅರಸನಾದ ಯೋರಾಮನು ಒಡನೆ ಇಸ್ರಯೇಲರನ್ನು ಕೂಡಿಸಿಕೊಂಡು ಸಮಾರಿಯದಿಂದ ಹೊರಟನು;
7
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
8
ಅದೂ ಅಲ್ಲದೆ, “ಯಾವ ಮಾರ್ಗವಾಗಿ ಬರಬೇಕು?” ಎಂದು ವಿಚಾರಿಸಿದನು. ಅದಕ್ಕೆ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಬರಬೇಕೆಂದನು.
9
ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು.
10
ಆದ್ದರಿಂದ ಇಸ್ರಯೇಲರ ಅರಸನು, “ಅಯ್ಯೋ, ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಸರ್ವೇಶ್ವರ ಇಲ್ಲಿಗೆ ಬರಮಾಡಿದ್ದಾರೆ,” ಎಂದು ಪರಿತಪಿಸಿದನು.
11
ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.
12
ಯೆಹೋಷಾಫಾಟನು, “ಅವನು ಹೇಗೂ ಸರ್ವೇಶ್ವರನ ಉತ್ತರವನ್ನು ತಿಳಿಸುವನು,” ಎಂದದ್ದರಿಂದ ಇಸ್ರಯೇಲ್ ಹಾಗು ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಬಂದರು.
13
ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.
14
ಆಗ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿಮ್ಮ ಜೊತೆಯಲ್ಲಿರದಿದ್ದರೆ ನಾನು ನಿಮ್ಮನ್ನು ನೋಡುತ್ತಿರಲಿಲ್ಲ; ಲಕ್ಷಿಸುತ್ತಲೂ ಇರಲಿಲ್ಲ.
15
ಈಗ ಒಬ್ಬ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಸರ್ವೇಶ್ವರನ ಶಕ್ತಿ ಪ್ರಾಪ್ತವಾಗುತ್ತಿತ್ತು).
16
ಅನಂತರ ಎಲೀಷನು ಇಸ್ರಯೇಲರ ಅರಸನಿಗೆ, “ಈ ಹಳ್ಳದ ತುಂಬಾ ಗುಂಡಿಗಳನ್ನು ಮಾಡಿರಿ;
17
ಗಾಳಿಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವುದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಪ್ರಾಣಿಗಳೂ ಕುಡಿಯಬಹುದು ಎಂಬುದಾಗಿ ಸರ್ವೇಶ್ವರ ನುಡಿಯುತ್ತಾರೆ.
18
ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು.
19
ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಳ್ಳುವಿರಿ. ಎಲ್ಲ ಹಣ್ಣಿನ ಮರಗಳನ್ನು ಕಡಿದುಹಾಕಿ, ಬಾವಿಗಳನ್ನು ಮುಚ್ಚಿಬಿಟ್ಟು, ಹೊಲಗಳನ್ನು ಕಲ್ಲು ತುಂಬಿಸಿ ಹಾಳುಮಾಡುವಿರಿ,” ಎಂದು ನುಡಿದನು.
20
ಪ್ರಾತಃಕಾಲದ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ನಾಡಿನಲ್ಲೆಲ್ಲಾ ತುಂಬಿಕೊಂಡಿತು.
21
ಅರಸುಗಳು ತಮಗೆ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆಂಬುದನ್ನು ಮೋವಾಬ್ಯರು ಕೇಳಿದರು. ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಗೆ ಬಂದರು.
22
ಬೆಳಿಗ್ಗೆ ಎದ್ದು ನೋಡುವಾಗ ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
23
ಆದ್ದರಿಂದ, “ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಹತರಾಗಿರಬೇಕು; ಮೋವಾಬ್ಯರೇ, ಏಳಿ, ಸುಲಿಗೆಗೆ ಹೋಗೋಣ,” ಎಂದು ಕೂಗಿಕೊಂಡು ಇಸ್ರಯೇಲರ ಪಾಳೆಯಕ್ಕೆ ಹೋದರು.
24
ಆದರೆ ಇಸ್ರಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ, ಅವರು ಮೋವಾಬ್ಯರನ್ನು ಸಂಹರಿಸುತ್ತಾ, ಅವರ ದೇಶದೊಳಗೆ ನುಗ್ಗಿದರು;
25
ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.
26
ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳುನೂರು ಮಂದಿ ಯೋಧರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಪ್ರಯತ್ನಿಸಿದನು; ಆದರೆ ಆಗದೆ ಹೋಯಿತು.
27
ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25