bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 4
2 Kings 4
Kannada Bible (KNCL) BSI 2016
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 5 →
1
ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.
2
ಎಲೀಷನು, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿದೆ, ಹೇಳು,” ಎಂದನು. ಅದಕ್ಕೆ ಆಕೆ, “ನಿಮ್ಮ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ,” ಎಂದು ಉತ್ತರಕೊಟ್ಟಳು.
3
ಆಗ ಎಲೀಷನು, “ಹೋಗಿ ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
4
ಅನಂತರ ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ ಎಣ್ಣೆಯನ್ನು ಆ ಪಾತ್ರೆಗಳಿಗೆ ಹೊಯ್ಯಿ, ತುಂಬಿದ ಆ ಪಾತ್ರೆಗಳನ್ನೆಲ್ಲಾ ಒಂದು ಕಡೆಯಿಡು,” ಎಂದು ಹೇಳಿದನು.
5
ಆಕೆ ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.
6
ಪಾತ್ರೆಗಳು ತುಂಬಿದಾಗ, ಆಕೆ ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು,” ಅನ್ನಲು ಅವನು, “ಪಾತ್ರೆಗಳು ತೀರಿಹೋದುವು,” ಎಂದು ಉತ್ತರಕೊಟ್ಟನು. ಕೂಡಲೆ ಎಣ್ಣೆ ಉಕ್ಕುವುದೂ ನಿಂತುಹೋಯಿತು.
7
ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.
8
ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಶ್ರೀಮಂತ ಮಹಿಳೆ ಇದ್ದಳು. ಆಕೆ ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
9
ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು.
10
ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು.
11
ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.
12
ಅನಂತರ ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆ ಬಂದು ಮುಂದೆ ನಿಂತಳು.
13
ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.
14
ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು.
15
ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು.
16
ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು.
17
ಆ ಮಹಿಳೆ ಗರ್ಭಿಣಿಯಾಗಿ, ಎಲೀಷನು ಹೇಳಿದಂತೆ ಮುಂದಿನ ವರ್ಷ, ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
18
ಹುಡುಗನು ದೊಡ್ಡವನಾದ ಮೇಲೆ, ಒಂದು ದಿನ ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
19
ಅಲ್ಲಿದ್ದಾಗ ಅವನು ಇದ್ದಕ್ಕಿದ್ದ ಹಾಗೆ, “ಅಪ್ಪಾ, ನನ್ನ ತಲೆ ಸಿಡಿಯುತ್ತಿದೆ, ಸಿಡಿಯುತ್ತಿದೆ,” ಎಂದು ಕೂಗಿಕೊಂಡನು. ತಂದೆ ಒಬ್ಬ ಸೇವಕನನ್ನು ಕರೆದು, “ಇವನನ್ನು ತಾಯಿಯ ಹತ್ತಿರ ತೆಗೆದುಕೊಂಡು ಹೋಗು,” ಎಂದು ಆಜ್ಞಾಪಿಸಿದನು.
20
ಸೇವಕನು ಹುಡುಗನನ್ನು ಅವನ ತಾಯಿಗೆ ತಂದೊಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
21
ಕೂಡಲೆ ಆಕೆ ಅವನನ್ನು ದೈವಪುರುಷನ ಕೋಣೆಗೆ ತೆಗೆದುಕೊಂಡು ಹೋಗಿ, ಅವನ ಮಂಚದ ಮೇಲೆ ಮಲಗಿಸಿ, ಬಾಗಿಲು ಮುಚ್ಚಿ, ಗಂಡನನ್ನು ಕರೆಯಿಸಿದಳು.
22
“ದಯವಿಟ್ಟು ನನಗಾಗಿ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸಿ; ನಾನು ಬೇಗನೆ ಆ ದೈವಪುರುಷನ ಬಳಿಗೆ ಹೋಗಿ ಬರುತ್ತೇನೆ,” ಎಂದು ಕೇಳಿದಳು.
23
ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.
24
ಆಕೆ, “ಚಿಂತೆಯಿಲ್ಲ,” ಎಂದು ಹೇಳಿ ಕತ್ತೆಗೆ ತಡಿಹಾಕಿಸಿ, ಕುಳಿತುಕೊಂಡು ಸೇವಕನಿಗೆ, “ಹೊಡೆ, ಓಡಿಸುತ್ತಾ ಹೋಗು; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ,” ಎಂದು ಆಜ್ಞಾಪಿಸಿದಳು.
25
ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ,
26
“ಅಗೋ, ಅಲ್ಲಿ ಶೂನೇಮ್ಯಳು; ನೀನು ಓಡಿಹೋಗಿ ಆಕೆಯನ್ನು ಭೇಟಿಯಾಗು; ‘ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ?’ ಎಂದು ವಿಚಾರಿಸು,” ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆ ಆ ಸೇವಕನಿಗೆ, “ಕ್ಷೇಮ,” ಎಂದು ಉತ್ತರಕೊಟ್ಟು, ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು.
27
ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.
28
ಆಕೆ ದೈವಪುರುಷನಿಗೆ, “ನನಗೆ ಒಬ್ಬ ಮಗ ಬೇಕೆಂದು ಒಡೆಯರಾದ ನಿಮ್ಮನ್ನು ನಾನು ಬೇಡಿಕೊಂಡೆನೆ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲವೆ?” ಎಂದಳು.
29
ಆಗ ಎಲೀಷನು ಗೇಹಜಿಗೆ, “ನೀನು ಹೋಗಿ, ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ, ಆ ಹುಡುಗನ ಮುಖದ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಯಾವ ವಂದನೆಯನ್ನೂ ಸ್ವೀಕರಿಸಬೇಡ,\ ಎಂದು ಹೇಳಿ ಕಳುಹಿಸಿದನು.
30
ಆದರೂ ಆ ಹುಡುಗನ ತಾಯಿ, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ,” ಎಂದಳು. ಆದ್ದರಿಂದ ಎಲೀಷನು ಆಕೆಯ ಜೊತೆಯಲ್ಲೇ ಹೊರಟನು.
31
ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿರಲಿಲ್ಲ, ಜೀವದ ಲಕ್ಷಣವಿರಲಿಲ್ಲ. ಆದುದರಿಂದ ಅವನು ಹಿಂದಿರುಗಿ ಬಂದು ಎಲೀಷನನ್ನು ಎದುರುಗೊಂಡು, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.
32
ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.
33
ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಸರ್ವೇಶ್ವರನನ್ನು ಪ್ರಾರ್ಥಿಸಿದನು.
34
ಅನಂತರ ಹುಡುಗನ ಬಾಯಿ, ಕಣ್ಣು, ಕೈಗಳಿಗೆ ತನ್ನ ಬಾಯಿ, ಕಣ್ಣು, ಕೈಗಳು ಮುಟ್ಟುವಂತೆ ಅವನ ಮೇಲೆ ಬೋರಲು ಬಿದ್ದನು. ಆದ್ದರಿಂದ ಹುಡುಗನ ದೇಹ ಬೆಚ್ಚಗಾಯಿತು.
35
ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯನ್ನು ತುಸುಹೊತ್ತು ಅತ್ತಿತ್ತ ಅಡ್ಡಾಡಿ, ತಿರುಗಿ ಅವನ ಮೇಲೆ ಬೋರಲು ಬೀಳಲು, ಹುಡುಗನು ಏಳು ಸಾರಿ ಸೀತು ಕಣ್ತೆರೆದನು.
36
ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ,” ಎಂದು ಆಜ್ಞಾಪಿಸಲು, ಅವನು ಆಕೆಯನ್ನು ಕರೆದನು. ಆಕೆ ಬಂದಾಗ ಎಲೀಷನು, “ನಿನ್ನ ಮಗನನ್ನುತೆಗೆದುಕೋ,” ಎಂದು ಹೇಳಿದನು.
37
ಆಕೆ ಹತ್ತಿರ ಬಂದು ಅವನ ಪಾದಗಳಿಗೆ ಬಿದ್ದು, ಸಾಷ್ಟಾಂಗ ನಮಸ್ಕಾರ ಮಾಡಿ, ಮಗನನ್ನು ತೆಗೆದುಕೊಂಡು ಹೋದಳು.
38
ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.
39
ಅವರಲ್ಲಿ ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ, ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು, ಉಡಿತುಂಬಾ ಅದರ ಕಾಯಿಗಳನ್ನು ಕಿತ್ತುಕೊಂಡುಬಂದು, ತುಂಡು ತುಂಡುಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.
40
ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು; ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೈವಪುರುಷನೇ, ಪಾತ್ರೆಯಲ್ಲಿ ವಿಷ!” ಎಂದು ಕೂಗಿದರು.
41
ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು.
42
ಒಂದು ದಿನ ಬಾಳ್ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.
43
ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು.
44
ಸೇವಕನು ಬಡಿಸಿದನು. ಸರ್ವೇಶ್ವರನು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಸಿಕೊಂಡರು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25